ರಾಮಕುಂಜ ಆ.ಮಾ.ಶಾಲೆಯಲ್ಲಿ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ರವರಿಗೆ ಶ್ರದ್ಧಾಂಜಲಿ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಾನಪದ ವಿದ್ವಾಂಸ, ಶಿಕ್ಷಣ ತಜ್ಞ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ರವರಿಗೆ ಶ್ರದ್ಧಾಂಜಲಿ ಸಭೆ ನಡೆಯಿತು.
ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ, ಪಾಲ್ತಾಡಿಯವರ ಜೀವನ-ಸಾಧನೆ ಮತ್ತು ತತ್ವಾದರ್ಶಗಳ ಬಗ್ಗೆ ಗುಣಗಾನ ಮಾಡಿದರು. ಸಹಶಿಕ್ಷಕಿ ಸರಿತಾರವರು ಪಾಲ್ತಾಡಿ ರಾಮಕೃಷ್ಣ ಆಚಾರ್‌ರವರನ್ನು ಸ್ಮರಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ. ಅವರು ಪಾಲ್ತಾಡಿಯವರ ಸರಳ ಜೀವನದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು ಎನ್, ಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here