ಮಂಗಳೂರು: ಹೇಯ್..ಹೀರೋ… ರೈ ಗಳೇ ಎಂದು ಹೇಳಿ ಪುತ್ತೂರು ಶಾಸಕ ಅಶೋಕ್ ರೈ ಹೆಗಲ ಮೇಲೆ ಕೈ ಹಾಕಿ ಭೇಷ್ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ ಘಟನೆ ಮಂಗಳೂರಿನ ಅದಾನಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯಿತು.
ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆಯಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ಅಶೋಕ್ ರೈ ಸ್ವಾಗತಿಸಿದರು. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಶಾಸಕ ಅಶೋಕ್ ರೈ ಅವರನ್ನು ನೋಡಿದ ತಕ್ಷಣ ಸಿ ಎಂ ಅವರು ಹೇಯ್ ಹೀರೋ.. ಭೇಷ್ ಎಂದು ಹೆಗಲಿಗೆ ಕೈ ಹಾಕಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರುಗಳು ಉಪಸ್ಥಿತರಿದ್ದರು.