ನಾಳೆ(ಮೇ.22): ಮಂಜಲ್ಪಡ್ಪು ಶ್ರೀ ದುರ್ಗಾಪರಮೇಶ್ವರೀ ರಕ್ತೇಶ್ವರೀ ಕ್ಷೇತ್ರದಲ್ಲಿ ನವ ಚಂಡಿಕಾ ಹೋಮ

0

ಪುತ್ತೂರು: ಮಂಜಲ್ಪಡ್ಪುವಿನಲ್ಲಿರುವ ಶ್ರೀ ದುರ್ಗಾಪರಮೇಶ್ವರೀ ರಕ್ತೇಶ್ವರೀ ಕ್ಷೇತ್ರದಲ್ಲಿ ಈ ಹಿಂದೆ ನಡೆದ ತಾಂಬೂಲ ಪ್ರಶ್ನೆಯಲ್ಲಿ ಕಂಡು ಬಂದಂತೆ ನವ ಚಂಡಿಕಾ ಹೋಮವು ಮೇ 22ರಂದು ಜರುಗಲಿದೆ.


ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನವ ಚಂಡಿಕಾ ಹೋಮ ನಡೆಯಲಿದೆ. ನವಚಂಡಿಕಾ ಹೋಮ ಸೇವೆ ಮಾಡಿಸುವ ಭಕ್ತರು ಸೇವಾ ರಶೀದಿಯನ್ನು ಪಡೆಯಬೇಕು. ಈ ಕಾರ್ಯದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ಷೇತ್ರದ ಜೀರ್ಣೋದ್ದಾರ, ಬ್ರಹ್ಮಕಲಶ ಮತ್ತು ಆಡಳಿತ ಸಮಿತಿ ತಿಳಿಸಿದೆ.

LEAVE A REPLY

Please enter your comment!
Please enter your name here