ಕೆಮ್ಮಾರ: ಮಳೆಗಾಲದಲ್ಲಿ ಮುಗಿಯದ ಸಮಸ್ಯೆ, ಪರಿಹರಿಸುವವರಿಲ್ಲವೇ ?

0

ಕೆಮ್ಮಾರ: ಮಳೆಗಾಲ ಪ್ರಾರಂಭವಾಗಿದ್ದು ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಮ್ಮಾರದಲ್ಲಿ ಮಳೆನೀರು ರಸ್ತೆಯಲ್ಲೇ ಹರಿಯುತ್ತಿದೆ. ಇದರಿಂದ ಬಸ್ಸಿಗೆ ಕಾಯುವ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳಿಗೆ ಕೆಸರು ನೀರು ಎರಚಿ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ಶಾಸಕರಿಗೂ ಮನವಿ ಸಲ್ಲಿಸಿದರೂ ಯಾವುದೇ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ. ಇತ್ತೀಚೆಗೆ ಈ ರಸ್ತೆಯ ದುರಸ್ತಿ ಕಾರ್ಯ ನಡೆದಿದ್ದು ಈ ಸಂದರ್ಭದಲ್ಲಿ ಸಮಸ್ಯೆ ಇರುವ ಈ ಸ್ಥಳವನ್ನು ಬಿಟ್ಟು ಸಮಸ್ಯೆಗಳಿಲ್ಲದ ಸ್ಥಳಗಳಲ್ಲಿ ದುರಸ್ತಿ ಕಾರ್ಯ ಮಾಡಲಾಗಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ರವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನೇನು ಶಾಲೆ ಪ್ರಾರಂಭವಾಗಲಿದ್ದು ವಿದ್ಯಾರ್ಥಿಗಳು ಶಾಲಾ ಸಮವಸ್ತ್ರವನ್ನು ಬ್ಯಾಗ್‌ನಲ್ಲಿ ಇಟ್ಟುಕೊಂಡು ಶಾಲೆಯಲ್ಲಿ ವಸ್ತ್ರ ಬದಲಾಯಿಸಬೇಕಾದೀತು. ಆದುದರಿಂದ ಇಲ್ಲಿನ ಸಮಸ್ಯೆ ಬಗ್ಗೆ ಲೋಕೋಪಯೋಗಿ ಇಲಾಖೆಯವರು ಗಮನಹರಿಸಿ ಪ್ರಯಾಣಿಕರು, ವಿದ್ಯಾರ್ಥಿಗಳಿಗೆ ಹಾಗೂ ಪಾದಚಾರಿಗಳಿಗೆ ಆಗುವ ತೊಂದರೆಯನ್ನು ನಿವಾರಿಸಿಕೊಡಬೇಕು ಎಂದು ಕೆಮ್ಮಾರ ಗ್ರಾಮಸ್ಥರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here