ಕೋಡಿಂಬಾಳ: ಆರ್ಥಿಕ ಸಮಸ್ಯೆಯಿಂದ ಖಿನ್ನತೆ-ವ್ಯಕ್ತಿ ಆತ್ಮಹತ್ಯೆ

0

ಕಡಬ: ಹಣಕಾಸಿನ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿ ವ್ಯಕ್ತಿಯೋರ್ವರು ಮನೆಯಲ್ಲಿ ಮರದ ಅಡ್ಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.21ರಂದು ನಡೆದಿದೆ. ಕೋಡಿಂಬಾಳ ಗ್ರಾಮದ ಅರ್ಪಾಜೆ ನಿವಾಸಿ ದಯಾನಂದ ರೈ(56.ವ) ಆತ್ಮಹತ್ಯೆ ಮಾಡಿಕೊಂಡವರು.


ಈ ಬಗ್ಗೆ ಮೃತರ ಪತ್ನಿ ವಾರಿಜ ರೈಯವರು ದೂರು ನೀಡಿ, ನಾನು ಕಡಬದಲ್ಲಿ ಕೆಲಸ ಮಾಡಿಕೊಂಡಿದ್ದು ಎಂದಿನಂತೆ ಇಂದು ಕೆಲಸಕ್ಕೆ ಹೋಗುವ ವೇಳೆ ಗಂಡ ಮನೆಯಲ್ಲಿದ್ದು ಸಂಜೆ ಕೆಲಸ ಮುಗಿಸಿ ಮನೆಗೆ ಬಂದಾಗ ಗಂಡ ಮನೆಯ ಒಳಗೆ ಮರದ ಅಡ್ಡಕ್ಕೆ ಕುತ್ತಿಗೆಗೆ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂತು. ಹಣದ ಸಮಸ್ಯೆಯಿಂದ ಸಾಲವನ್ನು ಕಟ್ಟಲಾಗದೆ ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿರುತ್ತದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೃತರು ಪತ್ನಿ ಮಕ್ಕಳು ಹಾಗೂ ಸಹೋದರ, ಸಹೋದರಿಯವರನ್ನು ಅಗಲಿದ್ದಾರೆ. ಮೃತರು ಒಡಿಯೂರು ಗ್ರಾಮ ವಿಕಾಸ ಯೋಜನೆಯ ಕಡಬ ವಲಯ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here