ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ಪ್ರಜ್ವಲ್ ರೈ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ.17 ರಂದು ವಾಟ್ಸಾಪ್ ಸಾಮಾಜಿಕ ಜಾಲತಾಣದಲ್ಲಿ ಪ್ರಜ್ವಲ್ ರೈ ಎಂಬಾತ ಕೀಳು ಮಟ್ಟದ ಅವಮಾನಕಾರಕ ಪದಗಳನ್ನು ಬಳಸಿ ತೇಜೋವಧೆ ಮಾಡಿದ್ದು, ಜೀವ ಬೆದರಿಕೆ ಹಾಕಿದ್ದರು ಎಂಬುದಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಬಿಜೆಪಿ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿ ಪುತ್ತೂರು ನಗರ ಠಾಣೆಗೆ ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಅದರಂತೆ ದೂರನ್ನು ಸ್ವೀಕರಿಸಿದ ಪೊಲೀಸರು ತನಿಖೆ ನಡೆಸಿ ಪುತ್ತೂರು ನಗರ ಠಾಣೆಯಲ್ಲಿ ಐಪಿಸಿ 1860 (U/S- 504,506) ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.