ಎಸ್‌ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ “ಲೀಡರ್ಸ್ ಮೀಟ್” ಕಾರ್ಯಕ್ರಮ

0

ಪುತ್ತೂರು: ಎಸ್‌ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ “ಲೀಡರ್ಸ್ ಮೀಟ್” ಕಾರ್ಯಕ್ರಮವು ಪುತ್ತೂರು ರೋಟರಿ ಮನಿಷಾ ಸಭಾಂಗಣದಲ್ಲಿ ಪಕ್ಷದ ಕ್ಷೇತ್ರ ಸಮಿತಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಅತಿಥಿಯಾಗಿ ಆಗಮಿಸಿದ್ದ ಪಕ್ಷದ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಫೈಝಿ ಅವರು ಮಾತಾಡಿ ರಾಷ್ಟ್ರೀಯ ರಾಜಕೀಯದ ಸ್ಥಿತಿಗತಿ ಮತ್ತು ಪ್ರಸಕ್ತ ರಾಜಕೀಯದಲ್ಲಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅವಶ್ಯಕತೆ ಹಾಗು ಕಾರ್ಯಕರ್ತರ ಜವಾಬ್ದಾರಿಗಳು ಎಂಬ ವಿಚಾರದಲ್ಲಿ ವಿಷಯ ಮಂಡಿಸಿದರು.
ಜಿಲ್ಲಾ ಅಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ರವರು ಪ್ರಾಸ್ತಾವಿಕವಾಗಿ ಮಾತನಾಡಿ ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ವಿವರಿಸಿದರು. ರಾಜ್ಯ ಸಮಿತಿ ಸದಸ್ಯ ಅಕ್ಬರ್ ಅಲಿ ಪೊನ್ನೋಡಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಸಾಂದರ್ಭಿಕವಾಗಿ ಮಾತಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿ ಸದಸ್ಯ ಅಬೂಬಕರ್ ಸಿದ್ದೀಕ್ ಕೆ.ಏ, ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ರಝಾಕ್ ಕೆನರಾ, ಕಾರ್ಯದರ್ಶಿ ಷರೀಫ್ ನಿಂತಿಕಲ್ಲು ರವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಿಯಾಝ್ ಬಳಕ್ಕ ನಿರೂಪಿಸಿ ವಂದಿಸಿದರು..

LEAVE A REPLY

Please enter your comment!
Please enter your name here