ಕನ್ಯಾನ: ಮೃತ ವ್ಯಕ್ತಿಯ ಸಾವಿನಲ್ಲಿ ಸಂಶಯ -ದಫನ ಮಾಡಿದ ಮೃತದೇಹವನ್ನು ಮೇಲಕ್ಕೆತ್ತಿದ ಪೊಲೀಸರು

0

ವಿಟ್ಲ : ಕೆಲದಿನಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನಲ್ಲಿ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಮೃತರ ಸಹೋದರ ಮಂಜೀಶ್ವರ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ದಫನ ಮಾಡಿದ ಮೃತದೇಹವನ್ನು ಮೇಲಕ್ಕೆತ್ತಿ ಮರು ತನಿಖೆ ಮಾಡುವ ಕಾರ್ಯಕ್ಕೆ ಮಂಜೇಶ್ವರ ಹಾಗೂ ವಿಟ್ಲ ಪೊಲೀಸರು ಮುಂದಾಗಿದ್ದಾರೆ.

ಕನ್ಯಾನ ಬಳಿಯ ಸುಂಕದಕಟ್ಟೆ ಮಜೀರ್ಪಳ್ಳ ನಿವಾಸಿ ಅಶ್ರಫ್ (44 ವ.) ರವರು ಮೃತಪಟ್ಟವರು. ಇವರು ಮೇ. 6 ರಂದು ಮೃತಪಟ್ಟಿದ್ದು, ಅದೇ ದಿನ ಸಂಜೆ ಕನ್ಯಾನ ಬಂಡಿತ್ತಡ್ಕದ ರಹ್ಮಾನಿಯಾ ಜುಮ್ಮಾ ಮಸೀದಿಯಲ್ಲಿ ಅವರ ಮೃತದೇಹವನ್ನು ದಫನ ಮಾಡಲಾಗಿತ್ತು. ಅಶ್ರಫ್ ರವರ ಸಾವಿನಲ್ಲಿ ಸಂಶಯ ವ್ಯಕ್ತ ಪಡಿಸಿದ ಸಹೋದರ ಇಬ್ರಾಹಿಂರವರು ಇದೊಂದು ಸಹಜ ಸಾವಲ್ಲ ಎಂದು ಆರೋಪಿಸಿ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಮಂಜೇಶ್ವರ ಪೊಲೀಸರು, ದಫನಗೊಂಡ ದೇಹವನ್ನು ಮೇಲಕ್ಕೆತ್ತಿ ಶವ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನಲೆಯಲ್ಲಿ ನ್ಯಾಯಾಲಯದ ಆದೇಶ ಪಡೆದು ಮಂಜೇಶ್ವರ ಪೊಲೀಸರು ರಹ್ಮಾನಿಯಾ ಜುಮ್ಮಾ ಮಸೀದಿಗೆ ಗುರುವಾರ ಬೆಳಿಗ್ಗೆ ಆಗಮಿಸಿದ್ದಾರೆ. ಮಂಗಳೂರಿನ ಯೆನೋಪಯ ಆಸ್ಪತ್ರೆಯ ಫಾರೆನ್ಸಿಕ್ ವಿಭಾಗದ ಸಿಬ್ಬಂದಿಗಳು, ಕಾಸರಗೋಡು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನೆರವು ನೀಡಲಿದ್ದಾರೆ. ಬಂಟ್ವಾಳ ತಹಶೀಲ್ದಾರ್ ಸ್ಥಳದಲ್ಲಿ ಉಪಸ್ಥಿತರಿದ್ದಾರೆ. ಘಟನೆ ಬಗ್ಗೆ ಮಾಹಿತಿ‌ ಅರಿತ ನೂರಾರು ಸಾರ್ವಜನಿಕರು ಘಟನಾ ಸ್ಥಳಕ್ಕೆ ಜಮಾಯಿಸುತ್ತಿದ್ದಾರೆ.

ಮೃತ ಅಶ್ರಫ್ ನವರು ತಮ್ಮ ವಾಸದ ಮನೆ ಸಮೀಪ ಗೂಡಂಗಡಿ ನಡೆಸುತ್ತಿದ್ದು, ಮೇ 5 ರಂದು ರಾತ್ರಿ ಗೂಡಂಗಡಿ ಮುಚ್ಚಿದ ಬಳಿಕ, ಆಹಾರ ಸೇವಿಸಿ ನಿದ್ರಿಸಿದ್ದರು. ಆದರೇ ಮರು ದಿನ ಬೆಳಗ್ಗೆ 6 ಗಂಟೆಗೆ ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಪತ್ನಿ ಮಾಹಿತಿ ನೀಡಿದ್ದರು. ಅಶ್ರಫ್ ಸಾವನ್ನಪ್ಪುವ ಸಂದರ್ಭ ಸಹೋದರ ಇಬ್ರಾಹಿಂ ಪುಣೆಯಲ್ಲಿದ್ದರು. ಸಾವಿನಲ್ಲಿ ನಿಗೂಢತೆ ಇರುವುದಾಗಿ ಸೂಚಿಸಿ ಇಬ್ರಾಹಿಂ ಪೊಲೀಸರಿಗೆ ದೂರು ನೀಡಿದ್ದಾರೆ. ಕೇಸು ದಾಖಲಿಸಿಕೊಂಡ ಮಂಜೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here