ಪುತ್ತೂರು: ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮೇ.23ರಂದು ಪುತ್ತಿಗೆ ಮಠಕ್ಕೆ ಭೇಟಿ ನೀಡಿ ಪೀಠಾಧಿಪತಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಈ ಸಂಧರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು.