ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

0

ಆಲಂಕಾರು: ಸೀಮಾ ದೇವಸ್ಥಾನ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ಮೇ.23ರಂದು ಕ್ಷೇತ್ರದ ತಂತ್ರಿಗಳಾದ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಕರ್ನಾಟಕ ಸರಕಾರದ ಧಾರ್ಮಿಕ ಪರಿಷತ್ತಿನ ಸದಸ್ಯರಾದ ಮಲ್ಲಿಕಾ ಪಕಳ, ಮಾಜಿ ಸಚಿವ ಅಂಗಾರ ಎಸ್, ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಗೋಪಾಲ.ಕೆಯವರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ಸೀಮಾ ದೇವಸ್ಥಾನ ವಾಗಿದ್ದು ಭಕ್ತಾಧಿಗಳ ಇಷ್ಟಾರ್ಥವನ್ನು ಈಡೇರಿಸುವ ಪವಿತ್ರ ಕ್ಷೇತ್ರವಾಗಿದೆ.ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ಪ್ರಾಯಶ್ಚಿತ ಕೆಲಸ ಕಾರ್ಯಗಳನ್ನು ಪೂರೈಸಿ ಇಂದು ಶಿಲಾನ್ಯಾಸ ಕಾರ್ಯಕ್ರಮ ನಡೆದಿದೆ. ಮುಂದೆ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು ಈ ಮೊದಲು ಪ್ರಕಟಣೆ ಮತ್ತು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿರುವ ಎಸ್.ಬಿ.ಐ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇಲ್ಲದೇ ಇರುವ ಕಾರಣ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶರವೂರು ಇದರ ಹೆಸರಿನಲ್ಲಿರುವ ಕೆನರಾ ಬ್ಯಾಂಕ್ ಆಲಂಕಾರು ಶಾಖೆಯ ಖಾತೆ ಸಂಖ್ಯೆ02042200004554 ಐ.ಎಫ್.ಎಸ್.ಸಿ ಸಂಖ್ಯೆ ಸಿ ಎನ್ ಆರ್ ಬಿ 0010204 ಕ್ಕೆ ಊರ ಪರವೂರ,ಸೀಮೆಯ ಸಹೃದಯಿ ಭಕ್ತಾಧಿಗಳು ದೇಣಿಗೆಯನ್ನು ನೀಡಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗುವಂತೆ ವಿನಂತಿಸಿದರು.


ಈ ಸಂಧರ್ಭದಲ್ಲಿ ಸೀಮೆಗೆ ಸಂಬಂಧಪಟ್ಟ ಗ್ರಾ.ಪಂ ಅಧ್ಯಕ್ಷರು, ವಿವಿಧ ದೇವಸ್ಥಾನ, ದೈವಸ್ಥಾನದ ಅಡಳಿತ ಮಂಡಳಿಯ ಅಧ್ಯಕ್ಷರುಗಳು ಪ್ರಮುಖರು, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು, ಸದಸ್ಯರುಗಳು, ಊರ ಪ್ರಮುಖರು, ವಿವಿಧ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಊರಪರವೂರ ಭಕ್ತಾಧಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಅರ್ಚಕರು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here