ಪುತ್ತೂರು: ಕಾಂಚನ ಈಶ್ವರ ಭಟ್ ಅವರ ಮನೆಯಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

0

ಪುತ್ತೂರು: ಕಾಂಚನ ಈಶ್ವರ ಭಟ್ ಅವರ ಪಡೀಲು ವಿಜಯನಗರ ಬಡವಾಣೆಯಲ್ಲಿರುವ ಮನೆಗೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ಮೇ.23 ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಕಾಂಚನ ಈಶ್ವರ ಭಟ್ ಅವರು ಸಂಗೀತ ಕಾರ್ಯಕ್ರಮಕ್ಕೆ ಮೈಸೂರಿಗೆ ಹೋಗಿದ್ದು, ಅವರ ಪುತ್ರ ಬೆಂಗಳೂರಿಗೆ ಹೋಗಿದ್ದರು. ಮೇ.23ರಂದು ಕಾಂಚನ ಈಶ್ವರ ಭಟ್ ಅವರು ಮನೆಗೆ ಬಂದಾಗ ಮನೆಯ ಎದುರಿನ ಬಾಗಿಲ ಬೀಗ ಮುರಿದು ಬಿದ್ದಿತ್ತು. ಒಳಗೆ ಹೋಗಿ ನೋಡಿದಾಗ ಚಿನ್ನಾಭರಣ ಕಳವಾಗಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಪುತ್ತೂರು ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸತೀಶ್ ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದುಕೊಂಡಿದ್ದು, ಸ್ಥಳಕ್ಕೆ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಬಂದು ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here