ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಕೊಡೆಕಲ್ಲು ಎಂಬಲ್ಲಿ ಹೆದ್ದಾರಿಯ ಮಧ್ಯೆ ಟ್ಯಾಂಕರ್ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಟ್ರಾಫಿಕ್ ಜಾಮ್ ಉಂಟಾದ ಘಟನೆ ಮೇ 24ರಂದು ಮುಂಜಾನೆ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಡಾಮರ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಮೇ 24ರಂದು ಮುಂಜಾನೆ 2 ಗಂಟೆಗೆ ಕೆಟ್ಟು ನಿಂತಿದೆ. ಟ್ಯಾಂಕರ್ ರಸ್ತೆಗೆ ಅಡ್ಡವಾಗಿ ನಿಂತ ಪರಿಣಾಮ ಇತರೇ ವಾಹನಗಳ ಓಡಾಟಕ್ಕೆ ಕೆಲ ಹೊತ್ತು ಅಡ್ಡಿ ಉಂಟಾಗಿತ್ತು. ಇದರಿಂದಾಗಿ ಹೆದ್ದಾರಿಯ ಎರಡೂ ಬದಿಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಸೂಕ್ತ ವ್ಯವಸ್ಥೆ ಕಲ್ಪಿಸಿದರು. ಬಳಿಕ ವಾಹನ ಸಂಚಾರ ಪುನರಾರಂಭಗೊಂಡಿತು.