ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಅರವಿಂದ ಬೋಳಾರ್ ಭೇಟಿ

0

ಪುತ್ತೂರು: ಖ್ಯಾತ ತುಳು ಚಿತ್ರನಟ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ ಬೋಳಾರ್ ಪುತ್ತೂರಿನ ನೆಹರುನಗರದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರೊಂದಿಗೆ ಸಂವಾದ ನಡೆಸಿದ ಅವರು ತಮ್ಮ ಮಾತುಗಳಿಂದ ಕಾಲೇಜು ಸಿಬ್ಬಂದಿಗಳನ್ನು ನಗೆಗಡಲಲ್ಲಿ ತೇಲಿಸಿದರು.

ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ ಶೆಟ್ಟಿಗಾರ್ ವಿ. ಮಾತುಗಳನ್ನಾಡಿದರು. ಸಂಸ್ಥೆಯ ಉಪಪ್ರಾಂಶುಪಾಲ ದೇವೀಚರಣ್ ರೈ ಎಂ. ವಂದಿಸಿದರು. ಕಲಾವಿದ ಬಿ. ಕೆ. ಶೆಟ್ಟಿ, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here