ಪದವೀಧರ ಕ್ಷೇತ್ರ, ಶಿಕ್ಷಕರ ಕ್ಷೇತ್ರ ಚುನಾವಣೆ-ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿಗಳಿಂದ ಎ.ವಿ ಬಾಳಿಗ ಆಸ್ಪತ್ರೆ ಭೇಟಿ

0

ಪುತ್ತೂರು:ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಎನ್‌ಡಿಎ ಮೈತ್ರಿ ಕೂಟದ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್ ಬೋಜೇ ಗೌಡ ಅವರು ಉಡುಪಿಯ ಪ್ರತಿಷ್ಠಿತ ಆಸ್ಪತ್ರೆಯಾದ ಡಾ ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಹೆಸರಾಂತ ವೈದ್ಯರು ಮತ್ತು ಡಾ ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಾ ವೈದಕೀಯ ನಿರ್ದೇಶಕರಾದ ಡಾ. ಪಿ. ವಿ ಭಂಡಾರಿ ಅವರನ್ನು ಭೇಟಿ ಮಾಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಬೆಂಬಲಿಸುವಂತೆ ಮತಯಾಚಿಸಲಾಯಿತು.


ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here