ರಸ್ತೆ ಅಪಘಾತ: ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಮೃತ್ಯು

0

ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತ ಯುವತಿ ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20).ಕೆಲ ಸಮಯಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಆಲ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಯಿತು.ದುರದೃಷ್ಟವಶಾತ್‌ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here