ರಾಮಕುಂಜ: ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ (ಎಂ.ಎಚ್.ಆರ್.ಡಿ ) ನವದೆಹಲಿ ಇದರ ಆಶ್ರಯದಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು ಇವರು 8ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸಿದ 2023-24ನೇ ಸಾಲಿನ ರಾಜ್ಯ ಮಟ್ಟದ ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ 15 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಾದ ವೀಣಾ ಎ., ಅನುಶ್ರೀ, ಹೃತಿಕ್ ಕೆ., ಬಿ ಧನುಷ್, ಹವ್ಯಶ್ರೀ, ಝಮೀರ, ಊರ್ಮಿಳಾ, ಅಪೇಕ್ಷ, ಶಾರ್ವರಿ ಹೆಚ್, ಅದಿತಿ, ಪಿ.ಎಸ್ ಕೀಶನ್ ಕುಮಾರ್, ಚಿನ್ಮಯಿ, ಧನ್ವಿತ್ ಕುಮಾರ್ ಪಿ., ತುಶಾರ್ ಕೆ, ಪ್ರಣಾಮ್ ಕುಮಾರ್ ರವರು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮುಂದಿನ ನಾಲ್ಕು ವರ್ಷ ತಲಾ 48 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ಲಭಿಸಲಿದೆ. ಈ ಪೈಕಿ ವೀಣಾ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳಿಗೆ ಉಚಿತ ತರಬೇತಿ:
8ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಎನ್‌ಎಂಎಂಎಸ್ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಾಲಾ ಅವಧಿ ಹೊರತು ಪಡಿಸಿ ರಜಾ ದಿನಗಳಲ್ಲಿ ಒಟ್ಟು 100 ಗಂಟೆಗಳ ಅವಧಿಯ ಉಚಿತ ತರಬೇತಿ, ಉಚಿತ ಕಲಿಕಾ ಸಾಮಾಗ್ರಿಗಳನ್ನು ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯ ವತಿಯಿಂದ ನೀಡಲಾಗಿದೆ. 6ಕ್ಕೂ ಹೆಚ್ಚು ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗಿದೆ ಎಂದು ಶಾಲಾ ಮುಖ್ಯಶಿಕ್ಷಕರಾದ ಸತೀಶ್ ಭಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.