ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ಮೇ.20-21 ರಂದು 2023-24 ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಆಚರಿಸಲಾಯಿತು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ,ಕ್ರೀಡೆ,ಸಾಹಿತ್ಯ,ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಮೇ.20ರಂದು ಆಯೋಜಿಸಲಾಗಿತ್ತು ವಸಿಷ್ಠಾಶ್ರಮ ಶಾಲೆ ಉಕ್ಕಿನಡ್ಕದ ಅಧ್ಯಕ್ಷ ಶಂಕರನಾರಾಯಣ ಭಟ್ , ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸತ್ಯನಾರಾಯಣ ಅಡಿಗ , ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ನೆಲ್ಲಿತಡ್ಕ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು.
ಬೆಳಿಗ್ಗೆ ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಂದ ರಾಧಾವಿಲಾಸ,ಕಂಸವಧೆ ಮತು ಅಗ್ರಪೊಜೆ ಪ್ರಸಂಗಗಳ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೇ.21ರಂದು ಕಾಲೇಜು ವಾರ್ಷಿಕೋತ್ಸವದ ವೇದಿಕೆ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಬಲ್ಮಠ ಮಂಗಳೂರು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಜಗದೀಶ ಬಾಳಾ ಭಾಗವಹಿಸಿ ನೈತಿಕ ಮೌಲ್ಯಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ರೂಢಿಸಿಕೊಳ್ಳಲು ಸಲಹೆ ನೀಡಿ ಕಲಿಕೆಯ ಸವಾಲುಗಳು ಹಾಗು ಸ್ಪರ್ಧಾ ಜಗತ್ತಿನಲ್ಲಿ ವಿದ್ಯಾರ್ಥಿಗಳ ತೊಡಗಿಸಿ ಕೊಳ್ಳುವಿಕೆ ಕುರಿತು ತಮ್ಮ ಭಾಷಣದಲ್ಲಿ ಅಭಿಪ್ರಾಯ ಹಂಚಿಕೊಂಡರು.
ಮತೋರ್ವ ಮುಖ್ಯ ಅಥಿತಿ ದಯಾನಂದ ರೈ ಕೋರ್ಮಂಡ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ವಾರ್ಷಿಕ ವರದಿಯನ್ನು ವಾಚಿಸಿದರು ಮತ್ತು ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾಲೇಜಿನ ದತ್ತಿನಿಧಿಯಿಂದ 2023-24ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕಗಳಿಸಿದ 16 ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಸಿ.ಡಿ.ಸಿ.ಸದಸ್ಯರು ಹಾಗು ಊರಿನ ಗಣ್ಯರು ಹಾಜರಿದ್ದರು. ಡಾ.ಕಾಂತೇಶ್.ಎಸ್ ಸಂಚಾಲಕರು ಐ.ಕ್ಯೂ.ಏ.ಸಿ, ಕಾಲೇಜು ವಿದ್ಯಾರ್ಥಿ ಪರಿಷತ್ತಿನ ಕಾರ್ಯದರ್ಶಿ ಮತ್ತು ಜೊತೆ ಕಾರ್ಯದರ್ಶಿಗಳಾದ ನಿತ್ಯಾನಂದ. ಮತ್ತು ಹರ್ಷಿತಾ.ಎನ್. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಎಲ್ಲ ಬೋಧಕರು ಮತ್ತು ಬೋಧಕೇತರ ಸಿಬ್ಬಂಧಿವರ್ಗ ಪೋಷಕರು ಹಾಗು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಂಜೂಷ ಪ್ರಾರ್ಥಿಸಿ, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಮಾರಣ್ಣ ಸ್ವಾಗತಿಸಿ, ಕಾಲೇಜು ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ದರ್ಶನ್ ಬಿ.ಡಿ.ವಂದಿಸಿ,ಉಪನ್ಯಾಸಕಿ ಪದ್ಮಜಾ ಕಾರ್ಯಕ್ರಮ ನಿರೊಪಿಸಿದರು.