ಪರಿಷತ್ ಚುನಾವಣೆ ಎಸ್.ಡಿ.ಎಂ ಕಾಲೇಜಿನಲ್ಲಿ ಎನ್.ಡಿ.ಎ ಅಭ್ಯರ್ಥಿಗಳಿಂದ ಮತ ಯಾಚನೆ

0

ಪುತ್ತೂರು: ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್ ಡಿ ಎ ಮೈತ್ರಿ ಕೂಟದ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕ ಕ್ಷೇತ್ರದ ಅಭ್ಯರ್ಥಿ ಎಸ್ ಎಲ್ ಭೋಜೇಗೌಡರು ಭೇಟಿ ನೀಡಿ ತಮ್ಮನ್ನು ಬೆಂಬಲಿಸಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.


ಈ ವೇಳೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ಲಾಲಾಜಿ ಮಂಡಲ್ , ಕಾಲೇಜಿನ ಪ್ರಾಂಶುಪಾಲರಾದ ಮಮತಾ ಸೇರಿದಂತೆ ಕಾಲೇಜಿನ ಆಡಳಿತವರ್ಗ ,ಉಪನ್ಯಾಸಕರು , ಸಿಬ್ಬಂದಿವರ್ಗ ಮತ್ತು ಪದವೀಧರ ಮತದಾರರು, ಸ್ಥಳೀಯ ಬಿಜೆಪಿ ಮುಖಂಡರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here