ಪರಿಷತ್ ಚುನಾವಣೆ-ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಸಭೆ

0

ಪುತ್ತೂರು:ಕರ್ನಾಟಕ ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುಣಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಸಭೆಯು ಮೇ.27ರಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರ ಅಧ್ಯಕ್ಷತೆಯಲ್ಲಿ ನಡೆಯಿತು.


ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಕಾರ್ಕಳ, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ಜನಪರ – ಜೀವಪರ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್ ಎಲ್ ಭೋಜೇಗೌಡ, ದ.ಕ ಲೋಕಸಭಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿಲ್ಲೆಯ ಶಾಸಕರುಗಳಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಕ್, ಹರೀಶ್ ಪೂಂಜಾ, ಭಾಗಿರಥಿ ಮುರುಳ್ಯ, ಮಂಗಳೂರು ಬಿಜೆಪಿ ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಪ್ರಮುಖರಾದ ಕ್ಯಾ. ಗಣೇಶ್ ಕಾರ್ಣಿಕ್, ಬಿಜೆಪಿ ಪ್ರಮುಖರು ಮತ್ತು ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here