![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಸಂಟ್ಯಾರಿನಲ್ಲಿ ನಡೆದಿದೆ.
![](https://puttur.suddinews.com/wp-content/uploads/2024/05/Capture-8.jpg)
ಪಾಣಾಜೆ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಸಂಟ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆ ಬದಿಯ ತಡೆ ಬೇಲಿಯಾಚೆಗೂ ದ್ವಿಚಕ್ರ ವಾಹನ ಬಿದ್ದಿದೆ. ಸುಮಾರು 10 ರಿಂದ 15 ದ್ವಿಚಕ್ರ ವಾಹನಗಳಿಗೆ ಗಂಭೀರ ಸ್ವರೂಪದ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಹಲವು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ಸಂಪ್ಯ ಠಾಣಾ ಪೊಲೀಸರು ತೆರಳಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
![](https://puttur.suddinews.com/wp-content/uploads/2024/05/8df05260-b1a5-48dd-b8b1-8c20c6433324.jpg)
![](https://puttur.suddinews.com/wp-content/uploads/2024/05/adc47411-8a16-4289-9243-9e5e329420de.jpg)