ನರಿಮೊಗರು ಪ್ರಾ.ಕೃ. ಸಹಕಾರ ಸಂಘದಲ್ಲಿ ರಸಗೊಬ್ಬರ, ಕೀಟನಾಶಕಗಳ ಸಮರ್ಪಕ ಬಳಕೆಯ ಮಾಹಿತಿ ಕಾರ್ಯಾಗಾರ

0

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರೈತರಿಗಾಗಿ ಬೆಳೆಗಳಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಸಮರ್ಪಕ ಬಳಕೆ ಬಗ್ಗೆ ಮಾಹಿತಿ, ಅಡಿಕೆ ಬೆಳೆ ಹಾಗೂ ಇತರೆ ಬೆಳೆಗಳನ್ನು ಬೆಳೆಸುವ ಬಗ್ಗೆ ಒಂದು ದಿನದ ಕೃಷಿ ಮಾಹಿತಿ ಕಾರ್ಯಾಗಾರವು ಮೇ.29ರಂದು ಸಂಘದ ಸಭಾ ಭವನದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಸಂಘದ ಅಧ್ಯಕ್ಷ ನವೀನ್ ಡಿ. ಮಾತನಾಡಿ, ಅಡಿಕೆ ಮತ್ತು ಇತರ ಬೆಳೆಗಳಿಗೆ ಕೀಟನಾಶಕ ಮತ್ತು ಸರಗೊಬ್ಬರಗಳ ಸಮರ್ಪಕ ಬಳಕೆಯ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಪಯುಕ್ತ ಮಾಹಿತಿಗಳನ್ನು ನೀಡಲಾಗುವುದು. ರೈತರು ಈ ಕಾರ್ಯಗಾರದ ಸದುಪಯೋಗ ಪಡಿಸಿಕೊಳ್ಳುವಂತೆ ಅವರು ತಿಳಿಸಿದರು.


ಸಂಘದ ಉಪಾಧ್ಯಕ್ಷ ಪವಿತ್ರ ಕೆ.ಪಿ., ಸಂಪನ್ಮೂಲ ವ್ಯಕ್ತಿಗಳಾದ ಸ್ಟೈನ್ಸ್ ಅಂಡ್ ಕಂಪನಿಯ ವಲಯ ವ್ಯವಸ್ಥಾಪಕ ಡಾ. ತೇಜಾಶಂಕರ್, ಹಾಗೂ ಕ್ಷೇತ್ರ ವ್ಯವಸ್ಥಾಪಕ ಟಿ ಸುಬ್ರಹ್ಮಣ್ಯಂ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ನಿರ್ದೇಶಕ ಜಯರಾಮ ಪೂಜಾರಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕರ ಆಚಾರ್ ಹಿಂದಾರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಸ್ಟೈನ್ಸ್ ಅಂಡ್ ಕಂಪನಿಯ ವಲಯ ವ್ಯವಸ್ಥಾಪಕ ಡಾ. ತೇಜಾಶಂಕರ್, ಹಾಗೂ ಕ್ಷೇತ್ರ ವ್ಯವಸ್ಥಾಪಕ ಟಿ. ಸುಬ್ರಹ್ಮಣ್ಯಂ ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು. ಸಂಘದ ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಹಲವು ಮಂದಿ ರೈತರು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here