ಈಶ್ವರಮಂಗಲ: ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆ, ಈಶ್ವರಮಂಗಲ ಇಲ್ಲಿಯ ಶಾಲಾ ಪ್ರಾರಂಭೋತ್ಸವವು ಮೇ.29ರಂದು ನಡೆಯಿತು. 2024-25ನೇ ಸಾಲಿನಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಶಿಕ್ಷಕರು ಆರತಿ ಬೆಳಗಿ ತಿಲಕ ಇಟ್ಟು ಸ್ವಾಗತಿಸಿ ಕಿರುಕಾಣಿಕೆಯನ್ನು ನೀಡಲಾಯಿತು.
ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾ ಇವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿ ಪೂರ್ಣಾತ್ಮರಾಮ್ ಮಾತನಾಡಿ ಶಿಕ್ಷಣದಲ್ಲಿ ಸರ್ವಾಂಗಗಳನ್ನು ಹೇಗೆ ದುಡಿಸಿಕೊಳ್ಳಬೇಕು ಹಾಗೂ ಗ್ರಂಥಾಲಯದ ಬಳಕೆಯಿಂದ ಆಗುವ ಪ್ರಯೋಜನಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಶಿವರಾಮ ಪಿ, ಪ್ರಾಂಶುಪಾಲ ಶಾಮಣ್ಣ ಕೆ ಹಾಗೂ ಪ್ರಭಾರ ಮುಖ್ಯಶಿಕ್ಷಕಿಯರಾದ ಸೌಮ್ಯ ಎ ಮತ್ತು ಲತಾ ಡಿ ಕೆ ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಧನಲಕ್ಷ್ಮಿ ಮತ್ತು ಸೌಮ್ಯ ಎಂ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಿಕ್ಷಕಿ ಅಕ್ಷತಾ ಕೆ ಸ್ವಾಗತಿಸಿ, ಮುಖ್ಯ ಶಿಕ್ಷಕಿಯಾದ ಸೌಮ್ಯ ಎ ವಂದಿಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರಾದ ನಾಗಪ್ಪ ಗೌಡ ಬೊಮ್ಮೆಟ್ಟಿ, ಶಿವರಾಮ ಶರ್ಮ, ನಹುಷ ಪಿ, ಪದ್ಮನಾಭ ಜಿ, ರತಿ ರಮೇಶ್ ಪೂಜಾರಿ ಹಾಗೂ ಶಿಕ್ಷಕಿರು, ವಿದ್ಯಾರ್ಥಿಗಳು ಮತ್ತು ಪೊಷಕರು ಉಪಸ್ಥಿತರಿದ್ದರು.