ಮಿಸಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಕಡಬದ ಕುವರಿಗೆ ಮೊದಲ ರನ್ನರ್‌ಅಪ್ ಕಿರೀಟ

0

ಕಡಬ: ಮಿಸಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಕಡಬದ ಕುವರಿ ಮೊದಲ ರನ್ನರ್‌ಅಪ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಕಡಬ ತಾಲೂಕು ಎಡಮಂಗಲದ ಮರ್ದೂರು ಮನೆಯ ಮೋಹನ್ ಎಂ. ಹಾಗೂ ಗುಣಾವತಿ ಕೆ.ಕೆ.ದಂಪತಿಯ ಪುತ್ರಿ ಸುಪ್ರಿಯಾ ಮೋಹನ್‌ರವರು ಅಂತಿಮ ಮೊದಲ ರನ್ನರ್‌ಅಪ್ ಕಿರೀಟ ಮುಡಿಗೇರಿಸಿಕೊಂಡರು.

ಪುಣೆಯ ಹಯಾತ್ ರೀಜೆನ್ಸಿಯಲ್ಲಿ ಮೇ.26ರಂದು ನಡೆದ 2024ನೇ ಸಾಲಿನ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆ ವಿವಿಧ ಆಕರ್ಷಣೆಗಳನ್ನು ಹೊಂದಿತ್ತು. ಈ ಸ್ಪರ್ಧೆಯ ಫೈನಲ್‌ನಲ್ಲಿ 14 ಸ್ಪರ್ಧಿಗಳು ಭಾಗವಹಿಸಿದ್ದರು. ಆಡಿಷನ್‌ನಲ್ಲಿ ಭಾಗವಹಿಸಿದ್ದ ನೂರಾರು ಗೃಹಿಣಿಯರಲ್ಲಿ ಅಂತಿಮವಾಗಿ 14 ಜನರನ್ನು ಮಾತ್ರ ಫೈನಲ್‌ಗೆ ಆಯ್ಕೆ ಮಾಡಲಾಗಿತ್ತು. ಮೇ.22 ರಿಂದ 25 ರ ತನಕ ನಡೆದ ಫೈನಲ್ ಇವೆಂಟ್ ಮೂರು ಸುತ್ತುಗಳನ್ನು ಒಳಗೊಂಡಿತ್ತು.


ಸಾಂಸ್ಕೃತಿಕ, ವ್ಯಕ್ತಿಯಾಧಾರಿತ, ವಿಷಯಾಧಾರಿತ, ಸಂದೇಶ ಆಧಾರಿತ ಉಡುಪು ಹೀಗೆ ಸ್ಪರ್ಧಿಗಳ ಆಯ್ಕೆಯ ಅನುಸಾರ ಮೊದಲ ಸುತ್ತನ್ನು ರೂಪಿಸಿತ್ತು. ಈ ಮೂರು ಸುತ್ತುಗಳಲ್ಲಿಯೂ ಅತ್ಯುತ್ತಮ ಪ್ರತಿಭೆ ತೋರಿದ ಸ್ಪರ್ಧಿಗೆ ವೈಯಕ್ತಿಕ ಟೈಟಲ್ ನೀಡಲಾಯಿತು. ಇದರಲ್ಲಿ ಸುಪ್ರಿಯಾ ಮೋಹನ್‌ರವರಿಗೆ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಮೊದಲ ರನ್ನರ್‌ಅಪ್ ಕಿರೀಟ ದೊರೆಯಿತು. ಇದರೊಂದಿಗೆ ಬೆಸ್ಟ್ ಕ್ಯಾಟ್ ವಾಕರ್ ವಿನ್ನರ್ ಪ್ರಶಸ್ತಿಯನ್ನು ಪಡೆದುಕೊಂಡರು. ಸುಪ್ರಿಯಾ ಮೋಹನ್‌ರವರು ವೃತ್ತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು, ಯುಎಸ್ ನ ಐಟಿ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರು ಮಡಿಕೇರಿ ತಾಲೂಕು ಪಾನತ್ತಲೆ ಮನೆಯ ಅರ್ಜುನ್ ಪಿ.ಜೆಯವರನ್ನು ವಿವಾಹವಾಗಿದ್ದು, 5 ವರ್ಷದ ಮಗ ಜಶ್ವಿಕ್‌ರೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇದರೊಂದಿಗೆ ಇವರು ಪ್ರೊಫೆಷನಲ್ ಬ್ರೈಡಲ್ ಮೇಕಪ್ ಆರ್ಟಿಸ್ಟ್ ಕೂಡ ಹೌದು.

LEAVE A REPLY

Please enter your comment!
Please enter your name here