ಪುತ್ತೂರು: ಉಚಿತ ವೈದ್ಯಕೀಯ ಶಿಬಿರದ ಮೂಲಕ ಮನೆ ಮಾತಾಗಿರುವ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯುವ ಉಚಿತ ವೈದ್ಯಕೀಯ ಶಿಬಿರದ 27ನೇ ತಿಂಗಳ ಶಿಬಿರವು ಜೂ.2ರಂದು ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ತಜ್ಞ ವೈದ್ಯ ಡಾ.ಸುರೇಶ್ ಪುತ್ತೂರಾಯ, ಡಾ.ಸ್ವಾತಿ, ಕೀಲು ಮತ್ತು ಎಲುಬು ತಜ್ಞ ವೈದ್ಯ ಡಾ. ಸಚಿನ್ ಶಂಕರ್ ಹಾರಕೆರೆ, ಶ್ವಾಸಕೋಶ ತಜ್ಞ ವೈದ್ಯ ಡಾ. ಪ್ರೀತಿರಾಜ್ ಬಲ್ಲಾಳ್, ಹೋಮಿಯೋಪತಿ ತಜ್ಞ ವೈದ್ಯ ಡಾ. ರಮೇಶ್ ಭಟ್, ಮಕ್ಕಳ ತಜ್ಞೆ ಡಾ. ಶ್ರೀದೇವಿ ವಿಕ್ರಂ, ಆಯುರ್ವೇದ ತಜ್ಞರಾದ ಡಾ. ಸಾಯಿ ಪ್ರಕಾಶ್, ಡಾ. ಶ್ರೀಜಾ ರೈ, ಡಾ. ದೀಪ್ತಿ ಆಗಮಿಸಿ ಶಿಬಿರವನ್ನು ನಡೆಸಿಕೊಡಲಿದ್ದಾರೆ. ಶಿಬಿರದಲ್ಲಿ ತಜ್ಞರಿಂದ ಸಾಮಾನ್ಯ ವೈದ್ಯಕೀಯ ತಪಾಸಣೆ, ಕೀಲು ಮತ್ತು ಎಲುಬು ತಪಾಸಣೆ, ಹೋಮಿಯೋಪತಿ ಚಿಕಿತ್ಸೆ, ಶ್ವಾಸಕೋಶ ತಪಾಸಣೆ, ಮಕ್ಕಳ ವೈದ್ಯಕೀಯ ತಪಾಸಣೆ, ಆಯುರ್ವೇದ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ ಹಾಗೂ ಉಚಿತ ಔಷಧಿಗಳ ವಿತರಣೆಯಾಗಲಿದೆ. ಭಕ್ತಾದಿಗಳು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ದೇವಸ್ಥಾನದ ಹಾಗೂ ಆರೋಗ್ಯ ರಕ್ಷಾ ಸಮಿತಿಯ ಪ್ರಕಟಣೆ ತಿಳಿಸಿದೆ.