ಉಪ್ಪಿನಂಗಡಿ: ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ

0

ಉಪ್ಪಿನಂಗಡಿ: ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ಡಾ. ಕೆ. ಮಂಜುನಾಥ್ ಕುಮಾರ್ ಹಾಗೂ ಆಯನೂರು ಮಂಜುನಾಥ್ ಅವರ ಪರ 34 ನೆಕ್ಕಿಲಾಡಿ ಗ್ರಾಮದಲ್ಲಿ ಮೇ.30ರಂದು ಮತಯಾಚನೆ ನಡೆಸಲಾಯಿತು.


ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾನಕ್ಕೆ ಅರ್ಹರಾಗಿರುವವರ ಮತದಾರರ ಮನೆ-ಮನೆಗೆ ತೆರಳಿ ಮತಯಾಚನೆ ನಡೆಸಲಾಯಿತು. ಈ ಸಂದರ್ಭ 34 ನೆಕ್ಕಿಲಾಡಿ ಕಾಂಗ್ರೆಸ್ ವಲಯಾಧ್ಯಕ್ಷೆ ಅನಿ ಮಿನೇಜಸ್, ಬೂತ್ ಅಧ್ಯಕ್ಷರಾದ ಅಬ್ದುಲ್ ಖಾದರ್, ನವಾಝ್ ಕರ್ವೇಲು, ಇಸಾಕ್, ಕಾಂಗ್ರೆಸ್ ಮುಖಂಡರಾದ ಪ್ರಹ್ಮಾದ್ ಬೆಳ್ಳಿಪ್ಪಾಡಿ, ಜಯಶೀಲ ಶೆಟ್ಟಿ, ಗಣೇಶ್ ನಾಯಕ್, ಪ್ರಕಾಶ್ ಗೌಡ, ಖಾದರ್ ಕವೇಲು, ಚಮ್ಮಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here