ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 2024- 25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಗಳ ಸಂಚಾಲಕ ವಂ. ಪ್ರಕಾಶ್ ಪಾವ್ಲ್ ಡಿಸೋಜ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿಗಳು ಶೈಕ್ಷಣಿಕ ನಿಯಮಾವಳಿಗಳನ್ನು ಪ್ರೀತಿಯಿಂದ ಆಚರಿಸಿದಾಗ ಉನ್ನತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ,ಪ್ರಜ್ಞಾವಂತ ಪ್ರಜೆಯನ್ನು ಸಮಾಜಕ್ಕೆ ನೀಡುವುದು ಶಿಕ್ಷಣದ ಉದ್ದೇಶ, ಅದಕ್ಕೆ ಪೂರಕವಾದ ವಾತಾವರಣ ಕಲ್ಪಿಸುವುದೇ ಪ್ರತಿಯೊಂದು ವಿದ್ಯಾ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು. ಶಿಕ್ಷಣ ಸಂಸ್ಥೆಗೆ ನೂತನವಾಗಿ ದಾಖಲುಗೊಂಡ ವಿದ್ಯಾರ್ಥಿಗಳಿಗೆ ಹೂಗುಚ್ಛ ಹಾಗೂ ಪಠ್ಯಪುಸ್ತಕಗಳನ್ನು ನೀಡುವ ಮೂಲಕ ಸಂಚಾಲಕ ಹಾಗೂ ಸಂಸ್ಥೆಯ ಮುಖ್ಯಸ್ಥ ಸ್ವಾಗತಿಸಿದರು.

ಸಭಾ ಕಾರ್ಯಕ್ರಮದಲ್ಲಿ ಸೈಂಟ್ ಅನ್ಸ್ ಶಾಲಾ ಪ್ರಾಂಶುಪಾಲ ವಂ. ಅಮಿತ್ ಪ್ರಕಾಶ್ ರೋಡ್ರಿಗಸ್, ಸೈಂಟ್ ಜೋಕಿಮ್ಸ್ ಕಾಲೇಜು ಪ್ರಾಂಶುಪಾಲ ಕಿರಣ್ ಕುಮಾರ್, ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಶ್ರೀಲತಾ, ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ಉಪಸ್ಥಿತರಿದ್ದರು.
ಸೈಂಟ್ ಅನ್ಸ್ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ದಕ್ಷಾ ಪ್ರಸಾದ್ ಸ್ವಾಗತಿಸಿ, ಸೈಂಟ್ ಜೋಕಿಮ್ಸ್ ಕಾಲೇಜು ಉಪನ್ಯಾಸಕ ಶ್ರೀ ಮ್ಯಾಥ್ಯೂ ಇ .ಜೆ ವಂದಿಸಿದರು. ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ಶಿಕ್ಷಕಿ ಶ್ರೀಮತಿ ಏಲಿಕುಟ್ಟಿ ಕಾರ್ಯಕ್ರಮ ನಿರೂಪಿಸಿದರು.