ಪೆರ್ಲಂಪಾಡಿ ಷಣ್ಮುಖದೇವ ಪ್ರೌಢ ಶಾಲಾ ಪ್ರಾರಂಭೋತ್ಸವ

0

ಪುತ್ತೂರು: ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಪ್ರೌಢಶಾಲೆಯಲ್ಲಿ ಮೇ.31ರಂದು ಶಾಲಾ ಪ್ರಾರಂಭೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.

ಎಂಟನೇ ತರಗತಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳು ಶಾಲಾ ಘೋಷ್ ವಾದ್ಯದೊಂದಿಗೆ ಸಂಭ್ರಮದಿಂದ ಹಿರಿಯರಿಂದ ತಿಲಕವಿಡಿಸಿಕೊಂಡು ಭಾರತ ಮಾತೆಗೆ ಪುಷ್ಪ ಸಮರ್ಪಿಸಿ ವಿದ್ಯಾ ದೇಗುಲವನ್ನು ಪ್ರವೇಶಿಸಿದರು.
ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷರು, ಸಂಚಾಲಕರು, ಸರ್ವ ಸದಸ್ಯರು, ಶಾಲಾ ಮುಖ್ಯಗುರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಆಡಳಿತ ಸಮಿತಿಯ ಪದಾಧಿಕಾರಿಗಳಿಂದ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣೆ ಕೂಡ ಈ ಸಂದರ್ಭದಲ್ಲಿ ನಡೆಯಿತು.

LEAVE A REPLY

Please enter your comment!
Please enter your name here