ಪಳ್ಳತ್ತಾರು ಶಾಲಾ ಪ್ರಾರಂಭೋತ್ಸವ

0

ಕಾಣಿಯೂರು: ಬೆಳಂದೂರು ಗ್ರಾಮದ ಪಳ್ಳತ್ತಾರು ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.
ಶಾಲೆಗೆ ಹೊರಟರೆ ಮಗು..ಮುಖದಲ್ಲಿ ನೋಡು ನಗು ಎಂಬಿತ್ಯಾದಿ ಘೋಷಣೆಗಳನ್ನು ಕೂಗುತ್ತಾ ವಿದ್ಯಾರ್ಥಿಗಳು ಪಳ್ಳತ್ತಾರು ಜಂಕ್ಷನ್ ತನಕ ಮೆರವಣಿಗೆಯಲ್ಲಿ ಸಾಗಿದರು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಉಮ್ಮರ್ ಶಾಫಿ, ಶಾಲಾ ಮುಖ್ಯಗುರು ಸೀತಾರಾಮ ಕೆ ಜಿ, ಶಿಕ್ಷಕ ರಂಗನಾಥ, ಶಿಕ್ಷಕಿ ಝರೀನಾ, ಎಸ್.ಡಿ.ಎಂ.ಸಿ ಸದಸ್ಯರಾದ ನವಾಝ್ ಸಖಾಫಿ, ಚಂದ್ರಶೇಖರ ಆಚಾರ್ಯ ಬನಾರಿ ಸೇರಿದಂತೆ ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ
ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು.

LEAVE A REPLY

Please enter your comment!
Please enter your name here