ನಿಡ್ಪಳ್ಳಿ: ಶಾಲಾ ಪ್ರಾರಂಭೋತ್ಸವ- ಸಮವಸ್ತ್ರ, ಪಠ್ಯ ಪುಸ್ತಕ ವಿತರಣೆ

0

ನಿಡ್ಪಳ್ಳಿ; ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ನಿಡ್ಪಳ್ಳಿ ಇಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಮೇ.31ರ ಇಂದು ನಡೆಯಿತು. ಮೆರವಣಿಗೆ ಮೂಲಕ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ಪದಾಧಿಕಾರಿಗಳು ಆರತಿ ಬೆಳಗಿ ತರಗತಿಗೆ ಸ್ವಾಗತಿಸಿದರು.

ಬಳಿಕ ಇಲಾಖೆ ನೀಡಿದ ಸಮವಸ್ತ್ರ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಕರುಣಾಕರ ರೈ ಮುಂಡೂರು, ಶಾಲಾ ಮುಖ್ಯ ಶಿಕ್ಷಕಿ ಹೇಮಾ.ಎನ್, ಶಿಕ್ಷಕಿ ಸುಮಾ.ಡಿ, ಅಂಗನವಾಡಿ ಕಾರ್ಯಕರ್ತೆ ಜಯಂತಿ.ಕೆ ಹಾಗೂ ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಪೋಷಕರು, ಅಕ್ಷರ ದಾಸೋಹ ಸಿಬ್ಬಂದಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here