ಪುಣಚ ಶ್ರೀದೇವಿ ವಿದ್ಯಾ ಕೇಂದ್ರದಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮ

0

ಪುಣಚ: ಪುಣಚ ದೇವಿನಗರ ಶ್ರೀದೇವಿ ವಿದ್ಯಾ ಕೇಂದ್ರದಲ್ಲಿ 2024- 25ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಸಂಭ್ರಮ ಮೇ.31ರಂದು ನಡೆಯಿತು.
ಘೋಷ್ ವಾದ್ಯಗಳೊಂದಿಗೆ ತೋರಣಗಳಿಂದ ಸಿಂಗರಿಸಿದ ಪ್ರವೇಶದ್ವಾರದ ಬಳಿಯಲ್ಲಿ ಶಿಕ್ಷಕಿಯರು ಮಕ್ಕಳಿಗೆ ಆರತಿ ಬೆಳಗಿಸಿ, ತಿಲಕ ಇಟ್ಟು, ಅಕ್ಷತೆ ಹಾಕಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಸಂಭ್ರಮದಿಂದ ಸಾಂಪ್ರದಾಯಕವಾಗಿ ವಿದ್ಯಾ ದೇಗುಲಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಪಠ್ಯಪುಸ್ತಕ ವಿತರಣೆಯನ್ನು ಮಾಡಲಾಯಿತು. ಬಳಿಕ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಶಾಲಾ ಆಡಳಿತ ಸಮಿತಿ, ಶಿಕ್ಷಕ ವೃಂದ, ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here