ಪುತ್ತೂರು: ಇಲ್ಲಿನ ನೆಲ್ಲಿಕಟ್ಟೆ ಡಾ.ಕೆ ಶಿವರಾಮ ಕಾರಂತ ಸರಕಾರಿ ಪ್ರೌಢಶಾಲೆ ಪುತ್ತೂರು ನಗರ ಇದರ 2024-25ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಮೇ.31ರಂದು ಎಸ್ ಡಿಎಂಸಿ ಕಾರ್ಯಾಧ್ಯಕ್ಷ ದಿನೇಶ್ ಕಾಮತ್ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಜಲಜಾಕ್ಷಿ ಕೆ ಎಂ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಸ್ ಡಿಎಂಸಿ ಕಾರ್ಯಾಧ್ಯಕ್ಷ ದಿನೇಶ್ ಕಾಮತ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಸರಕಾರದಿಂದ ಒದಗಿಸಲಾದ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಲಾಯಿತು. ಕನ್ನಡ ಶಿಕ್ಷಕ ನಾರಾಯಣ ನಾಯ್ಕ್ ಎ ಶಾಲಾ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಎಸ್ ಡಿಎಂಸಿ ಸದಸ್ಯ ಬಾಲಚಂದ್ರ.ಎ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಿಂದಿ ಶಿಕ್ಷಕ ಅಬ್ರಹಾಂ ಎಸ್ ಎ ಕಾರ್ಯಕ್ರಮ ನಿರೂಪಿಸಿದರು. ಕಲಾ ಶಿಕ್ಷಕಿ ನಳಿನಿ ಎ ವಂದಿಸಿದರು. ಶಿಕ್ಷಕರಾದ ಪ್ರಮೀಳಾ ಬಿ ಕೆ, ಡಾ.ಚಾಂದಿನಿ, ವೀಣಾ ಎ ವಿ, ಕಚೇರಿ ಸಿಬ್ಬಂದಿ ಮಲ್ಲರಾಜು ಸಹಕರಿಸಿದರು.