ಜೂ.1,2ರಂದು ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನಾ ಸಂಕೀರ್ತನೆ

0

ಪುತ್ತೂರು: ಬಂಟ್ವಾಳ ತಾಲೂಕು ಪರಾಜೆ, ಮಾಣಿ ಹಾಗೂ ಅರಬೆಟ್ಟು ಗ್ರಾಮಗಳಿಗೆ ಸಂಬಂಧಪಟ್ಟ ಗ್ರಾಮ ದೇವಸ್ಥಾನವಾಗಿರುವ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನವೀಕರಣದ ನಿಮಿತ್ತ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಶ್ರೀ ವಿಷ್ಣುಮೂರ್ತಿ ದೇವರಿಗೆ ಏಕಾಹ ಭಜನೆ ಜೂ.01ಮತ್ತು ಜೂ.2ರಂದು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸನ್ನಿಧಿಯಲ್ಲಿ ನಡೆಯಲಿದೆ.

ಭಜನೆಯಲ್ಲಿ ಸುಮಾರು 18 ಬೇರೆ ಬೇರೆ ಭಜನಾ ಮಂಡಳಿಗಳು ಭಾಗವಹಿಸಿ ಭಜನಾ ಸಂಕೀರ್ತನೆ ನಡೆಸಲಿದೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ಭಗವಭಕ್ತರು ಭಾಗವಹಿಸುವಂತೆ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here