ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ 2023 -24ನೇ ಶೈಕ್ಷಣಿಕ ವರ್ಷದ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ಸಾಧಕ ವಿದ್ಯಾರ್ಥಿಗಳಿಗೆ ಮತ್ತು ಸಂಸ್ಥೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಸರಸ್ವತಿ ಎಂ ಇವರಿಗೆ ಅಭಿನಂದನಾ ಕಾರ್ಯಕ್ರಮ ಪ್ರಗತಿ ವಿದ್ಯಾಸಂಸ್ಥೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲು ಉದ್ಘಾಟಿಸಿ ಮಾತನಾಡಿ, ಸಾಧಕ ವಿದ್ಯಾರ್ಥಿಗಳು ಮುಂದೆ ಉತ್ತಮ ವಿದ್ಯಾಭ್ಯಾಸ ಪಡೆದು ಸತ್ಪ್ರಜೆಯಾಗಿ ಬಾಳಿದರೆ ಸಂಸ್ಥೆಯ, ಗುರುವೃಂದದವರ ,ಹೆತ್ತವರ ಪ್ರಯತ್ನ ಸಾರ್ಥಕವಾಗುತ್ತದೆ ಎಂದರಲ್ಲದೆ ಸಂಸ್ಥೆಯಿಂದ ನಿವೃತ್ತರಾಗುತ್ತಿರುವ ಮುಖ್ಯಗುರು ಸರಸ್ವತಿ ಎಂ ರವರ ನಿಸ್ವಾರ್ಥ, ಕ್ರಿಯಾಶೀಲ ಸೇವೆಯನ್ನು ಕೊಂಡಾಡಿದರು. ಸಭಾಧ್ಯಕ್ಷತೆಯನ್ನು ವಹಿಸಿರುವ ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿಯವರು ಮಾತನಾಡಿ, ಸಂಸ್ಥೆಯ ಸರ್ವತೋಮುಖ ಪ್ರಗತಿಯಲ್ಲಿ ಮುಖ್ಯಗುರು ಸರಸ್ವತಿಯವರ ಪಾತ್ರ ಹಿರಿದು. ಮುಂದೆಯೂ ಅವರ ಸೂಕ್ತ ಸಲಹೆಗಳು ನಮಗೆ ಅತಿ ಮುಖ್ಯ ಎಂದರು. ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಪ್ರೋತ್ಸಾಹಿಸಿದರು. ಮುಖ್ಯ ಅತಿಥಿಗಳಾದ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಚಂದ್ರಹಾಸ ರೈ ಅಗಲ್ಪಾಡಿ, ಗಿರಿಶಂಕರ್ ಸುಲಾಯ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆ ಎಂ ಬಿ ,ಮುಖ್ಯಗುರು ನಾರಾಯಣ ಭಟ್, ಪೋಷಕ ಬಂಧು ಧನಂಜಯ ಕೇನಾಜೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದಲೂ ಎಸ್ ಎಸ್ ಎಲ್ ಸಿ ಯಲ್ಲಿ ಗರಿಷ್ಠ ಅಂಕಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಮತ್ತು ಅದಕ್ಕೆ ಸಹಕರಿಸಿದ ಎಸ್ ಎಸ್ ಎಲ್ ಸಿ ಶಿಕ್ಷಕ ವೃಂದದವರನ್ನು ಮತ್ತು ನಿವೃತ್ತ ಮುಖ್ಯ ಗುರು ಸರಸ್ವತಿ ಯಂ ಅವರನ್ನು ಸಂಘದ ಅಧ್ಯಕ್ಷರಾದ ದೀಕ್ಷಿತ್ ಬಂಡಾಜೆ ಮತ್ತು ಶ್ರವಣ್ ಸಾಮಾನಿ ಅಭಿನಂದಿಸಿದರು.
ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಜ್ಞಾನೇಶ್ವರಿ, ಶಾಲಾಡಳಿತ ಮಂಡಳಿಯ ಟ್ರಸ್ಟಿಗಳಾದ ದೇವಿಕಿರಣ್ ರೈ ಮಾದೋಡಿ, ಹರಿಚರಣ್ ರೈ ಮಾದೋಡಿ, ಹಿರಿಯ ಶಿಕ್ಷಕಿ ಸವಿತಾ ಕೆ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಮಾನ್ವಿ ಜಿ ಎಸ್, ರಾಶಿ ಕೆ ಸಿ, ಅನುಶ್ರೀ ಎ ಎಂ, ಮೃಣಾಲಿ ಎಂ ಪ್ರಾರ್ಥಿಸಿದರು. ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ ಮತ್ತು ಪುಷ್ಪ ಬಿ ಜೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು. ಆಂಗ್ಲ ಮಾಧ್ಯಮದ ಸಹ ಮುಖ್ಯಸ್ಥೆ ಅನಿತ ಜೆ ರೈ ರವರು ನಿವೃತ್ತ ಮುಖ್ಯ ಗುರುಗಳ ಅಭಿನಂದನಾ ಪತ್ರವನ್ನು ವಾಚಿಸಿದರು. ಸಹ ಆಡಳಿತ ಅಧಿಕಾರಿ ಹೇಮಾನಾಗೇಶ್ ರೈ ವಂದಿಸಿದರು. ಶಿಕ್ಷಕಿಯರಾದ ಕವಿತ ವಿ ರೈ ಮತ್ತು ಧನ್ಯ ಎಂ ಕೆ ಕಾರ್ಯಕ್ರಮ ನಿರೂಪಿಸಿದರು.