ಬಡಗನ್ನೂರು ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಪುತ್ತೂರು: ಪ್ರಥಮವಾಗಿ ಒಂದನೇ ತರಗತಿಗೆ ಸೇರುವ ಮಕ್ಕಳಿಗೆ ಶಾಲಾ ಮುಖ್ಯದ್ವಾರದ ಬಳಿ ತಾ.ಪಂ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಮಕ್ಕಳಿಗೆ ಬಲೂನ್ ಮತ್ತು ಹೂ ನೀಡಿ ಸ್ವಾಗತಿಸಿದರು. ಬಳಿಕ ಬ್ಯಾಂಡ್ ವಾದ್ಯ ಘೋಷದೊಂದಿಗೆ ಶಾಲಾ ಮುಖ್ಯ ದ್ವಾರದಿಂದ ಮೆರವಣಿಗೆ ಮೂಲಕ ಶಾಲೆಗೆ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ  ಬಾಬು ಮೂಲ್ಯ, ಉಪಾಧ್ಯಕ್ಷೆ  ವಿಜಯಲಕ್ಷ್ಮಿ, ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ನಾಯ್ಕ, ಶಾಲಾ ಮುಖ್ಯ. ಶಿಕ್ಷಕಿ ಹರಿಣಾಕ್ಷಿ ಎ.  ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ  ಶ್ರೀಧರ ನಾಯ್ಕ ನೇರ್ಲಂಪ್ಪಾಡಿ ಹಾಗೂ ಎಸ್.ಡಿ.ಯಂ.ಸಿ.ಸದಸ್ಯರು, ಮಕ್ಕಳ ಪೋಷಕರು ಮತ್ತು ವಿದ್ಯಾರ್ಥಿಗಳು ಮತ್ತು ಅಕ್ಷರ ದಾಸೋಹ ಸಿಬ್ಬಂದಿಗಳು  ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಪಠ್ಯ ಪುಸ್ತಕ ವಿತರಣೆ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಕಕಿ ಹರಿಣಾಕ್ಷಿ ಎ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಹ ಶಿಕ್ಷಕಿಯರಾದ ವಿಜಯಲಕ್ಷ್ಮಿ ವಂದಿಸಿದರು. ಶಿಕ್ಷಕಿ ರಮ್ಯಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here