ಕೊಯಿಲ ಬಡಗನ್ನೂರು ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

0

ಬಡಗನ್ನೂರು: ಕೊಯಿಲ ಬಡಗನ್ನೂರು ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.
ಒಂದನೇ ತರಗತಿಗೆ ಸೇರುವ ಪುಟಾಣಿಗಳಿಗೆ ಬಲೂನ್ ಮತ್ತು ಹೂ ನೀಡಿ ಬ್ಯಾಂಡ್ ವಾದ್ಯ ಘೋಷದೊಂದಿಗೆ  ಕೊಯಿಲ ಜಂಕ್ಷನ್ ನಿಂದ ಮೆರವಣಿಗೆಯಲ್ಲಿ ಶಾಲೆ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸತೀಶ್ ನಾಯ್ಕ, ಉಪಾಧ್ಯಕ್ಷೆ ನಯನ ರೈ ಬಡಕಾಯೂರು, ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾವತಿ ಎಂ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ್ ರೈ ಕೊಯಿಲ, ಹಾಗೂ ಎಸ್.ಡಿ.ಯಂ.ಸಿ.ಸದಸ್ಯರು, ಮಕ್ಕಳ ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಪಠ್ಯ ಪುಸ್ತಕ ವಿತರಣೆ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾವತಿ ಎಂ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಹ ಶಿಕ್ಷಕಿ ಸೌಮ್ಯ ಬಿ ವಂದಿಸಿದರು. ಸಹ ಶಿಕ್ಷಕ ಗಿರೀಶ್ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿ ಸರಳಾ ಡಿ ವಂದಿಸಿದರು.

LEAVE A REPLY

Please enter your comment!
Please enter your name here