ಪಾಣಾಜೆ ಸುಬೋಧ ಪ್ರೌಢಶಾಲಾ ಪ್ರಾರಂಭೋತ್ಸವ 

0

ನಿಡ್ಪಳ್ಳಿ: 2024-2025ನೇ ಶೈಕ್ಷಣಿಕ ಸಾಲಿನ ಪಾಣಾಜೆ ಸುಬೋಧ ಪ್ರೌಢಶಾಲಾ ಪ್ರಾರಂಭೋತ್ಸವವು ಶಾಲಾ ಸಂಚಾಲಕರಾದ ಗಿಳಿಯಾಲು ಮಹಾಬಲೇಶ್ವರ ಭಟ್ಟರ ಅಧ್ಯಕ್ಷತೆಯಲ್ಲಿ ಮೇ.31 ರಂದು ವಿಜೃಂಭಣೆಯಿಂದ ಜರಗಿತು.

ಅಧ್ಯಕ್ಷರು ತನ್ನ ಭಾಷಣದಲ್ಲಿ ಶಿಕ್ಷಣದ ಪ್ರಾಮುಖ್ಯತೆ, ಹಾಗೂ ಮಕ್ಕಳ ಕರ್ತವ್ಯಗಳ ಬಗ್ಗೆ ತಿಳಿಸಿದರು.ಶಾಲಾ ಮಕ್ಕಳಿಗೆ ಪುಸ್ತಕಗಳನ್ನು ಹಾಗೂ ಸಂಚಾಲಕರು ಕೊಡ ಮಾಡಿದ ಪೆನ್ನುಗಳನ್ನು ವಿತರಿಸಲಾಯಿತು.

 ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿ ಮುಖ್ಯ ಶಿಕ್ಷಕ ಶ್ರೀಪತಿ ಭಟ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್ ಪಿ ಯವರು ಶಾಲೆಯಲ್ಲಿ ಅನುಸರಿಸಬೇಕಾದ ನಿಯಮಗಳನ್ನು ವಿವರಿಸಿ ವಂದಿಸಿದರು. ಸಹ ಶಿಕ್ಷಕಿ  ನಿರ್ಮಲ ಕೆ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

LEAVE A REPLY

Please enter your comment!
Please enter your name here