ಕುಂತೂರು: ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಜಾರಿಬಿದ್ದು ಗಾಯಗೊಂಡಿದ್ದ ವಿಶ್ವನಾಥ ಗೌಡ ನಿಧನ

0

ಪೆರಾಬೆ: ಗುಡ್ಡದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಂತೂರು ಗ್ರಾಮದ ಬಲತ್ತನೆ ನಿವಾಸಿ ವಿಶ್ವನಾಥ ಗೌಡ(45 ವ.)ಅವರು ಮೇ.31ರಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವಿಶ್ವನಾಥ ಗೌಡ ಅವರು ಮೇ.30ರಂದು ತಮ್ಮ ತೋಟದ ಗುಡ್ಡ ಪ್ರದೇಶದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದರು. ಇದರಿಂದ ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೇ.31ರಂದು ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದಾರೆ. ವಿಶ್ವನಾಥ ಗೌಡ ಅವರು ಕುಂತೂರು ನೇರೋಳ್‌ಪಲ್ಕೆ ಶ್ರೀ ರಾಜನ್ ದೈವಸ್ಥಾನದ ಆಡಳಿತ ಸಮಿತಿ ಸದಸ್ಯರಾಗಿ, ಒಕ್ಕಲಿಗ ಗೌಡ ಸೇವಾ ಸಂಘದ ಕುಂತೂರು ಗ್ರಾಮ ಸಮಿತಿ ಸದಸ್ಯರಾಗಿ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ತೊಡಗಿಕೊಂಡಿದ್ದರು. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here