ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

0

ನೆಲ್ಯಾಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಂತಿನಗರ ಗೋಳಿತ್ತಟ್ಟು ಇಲ್ಲಿ 2024-25ನೇ ಸಾಲಿನ ಪ್ರಾರಂಭೋತ್ಸವವನ್ನು ಮೇ 31ರಂದು ವಿಜೃಂಭಣೆಯಿಂದ ಆಚರಿಸಲಾಯಿತು.
ಹೊಸದಾಗಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೂ ನೀಡಿ, ಶಾಲು ಹಾಕಿ, ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ವಾದನದೊಂದಿಗೆ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.

ಶಾಲಾ ಹಿತೈಷಿಗಳಾದ ಬಾಬು ಪೂಜಾರಿ ಕಿನ್ಯಡ್ಕರವರು ದೀಪ ಬೆಳಗಿಸಿ ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು. ಎಸ್‌ಡಿಎಂಸಿ ಅಧ್ಯಕ್ಷರಾದ ಪುರುಷೋತ್ತಮ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅಂಗನವಾಡಿ ಶಿಕ್ಷಕಿ ರೀತಾಕ್ಷಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ಮೀನಾಕ್ಷಿ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಪ್ರದೀಪ್ ಬಾಕಿಲ ಸ್ವಾಗತಿಸಿ, ಈ ಶೈಕ್ಷಣಿಕ ವರ್ಷದ ಯೋಜನೆಯ ಬಗ್ಗೆ ತಿಳಿಸಿದರು. ಅತಿಥಿ ಶಿಕ್ಷಕಿ ಪ್ರಮೀಳಾ ವಂದಿಸಿದರು. ಶಿಕ್ಷಕ ಮಂಜುನಾಥ ಮಣಕವಾಡ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿಯರಾದ ಸುಗಂಧಿ ಹಾಗೂ ಮೋಹಿನಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಮಾಜಿ ಅಧ್ಯಕ್ಷರಾದ ಮೋನಪ್ಪ ಪೂಜಾರಿ ಡೆಂಬಲೆ, ರಮೇಶ್ ಪೆರ್ಲ, ಎಸ್‌ಡಿಎಂಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here