ರಾಮಕುಂಜ: ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ

0

ರಾಮಕುಂಜ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮ ರಾಮಕುಂಜದ ಶ್ರೀ ರಾಮಕುಂಜೇಶ್ವರ ವಸತಿ ಶಾಲೆಯ ಸಭಾಂಗಣದಲ್ಲಿ ಜರಗಿತು.
ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ಅಧ್ಯಕ್ಷರಾದ ಕೆ.ಸೇಸಪ್ಪ ರೈಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಹಿತ್ಯ ಪರಿಷತ್ತಿನ ಸ್ಥಾಪನೆಯ ಉದ್ದೇಶದ ಬಗ್ಗೆ ವಿವರಿಸಿದರು. ಶ್ರೀ ರಾಮಕುಂಜೆಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕನ್ನಡ ಅಧ್ಯಾಪಕರಾದ ಕಿಶೋರ್ ಕುಮಾರ್ ಬಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಉಗಮದ ಇತಿಹಾಸ ಮತ್ತು ಕಾರ್ಯಗಳ ಬಗ್ಗೆ ಉಪನ್ಯಾಸಗೈದರು. ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯ ಆಡಳಿತಾಧಿಕಾರಿ ಆನಂದ ಎಸ್.ಟಿ.ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಕ.ಸಾ.ಪ ಕಡಬ ತಾಲೂಕು ಘಟಕದ ಪದಾಧಿಕಾರಿಗಳು, ಶಾಲಾ ಮುಖ್ಯಗುರುಗಳು, ಶಿಕ್ಷಕರು, ಕನ್ನಡ ಅಭಿಮಾನಿಗಳು ಪಾಲ್ಗೊಂಡಿದ್ದರು. ಸಂಸ್ಥೆಯ ಮುಖ್ಯಗುರು ಗಾಯತ್ರಿ ಯು.ಎನ್ ವಂದಿಸಿದರು. ಕ.ಸಾ.ಪ ಕಡಬ ತಾಲೂಕು ಘಟಕದ ಕೋಶಾಧಿಕಾರಿ ಬಾಲಚಂದ್ರ ಮುಚ್ಚಿಂತಾಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here