ಪರಿಷತ್ ಚುನಾವಣೆ :ಎನ್‌ಡಿಎ ಮೈತ್ರಿ ಅಭ್ಯರ್ಥಿಗಳ ಪರ ಪುತ್ತೂರಿನ ಶಾಲಾ ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ

0

ಪುತ್ತೂರು: ಕರ್ನಾಟಕ ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಜೂ.3ರಂದು ನಡೆಯುವ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿಕೂಟದ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್ ಬೋಜೇ ಗೌಡ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಪುತ್ತೂರಿನ ಶಾಲಾ ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ ನಡೆಯಿತು.


ಪುತ್ತೂರಿನ ನೆಹರುನಗರದ ವಿವೇಕಾನಂದ ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ, ನರೇಂದ್ರ ಪದವಿಪೂರ್ವ ಕಾಲೇಜು, ಅಂಬಿಕಾ ಪದವಿಪೂರ್ವ ಹಾಗೂ ಪದವಿ ಕಾಲೇಜು, ಸಂತ ಫಿಲೋಮಿನಾ ಕಾಲೇಜು, ಜೂನಿಯರ್ ಕಾಲೇಜು ಕೊಂಬೆಟ್ಟು, ಸುಧಾನ ವಸತಿಯುತ ಶಾಲೆ ಮಂಜಲ್ಪಡ್ಪು, ಅಕ್ಷಯ ಕಾಲೇಜು ಸಂಪ್ಯ ಇಲ್ಲಿ ಶಿಕ್ಷಕರು ಹಾಗೂ ಶಿಕ್ಷಕೇತರರ ಮತಯಾಚಿಸುವ ಮೂಲಕ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡರ ಜೊತೆ ತೆರಳಿ ಬಿರುಸಿನ ಪ್ರಚಾರ ನಡೆಸಲಾಯಿತು.


ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಮುಖಂಡ ಅರುಣ್ ಪುತ್ತಿಲ, ನಗರಸಭಾ ನಿಕಟಪೂರ್ವ ಅಧ್ಯಕ್ಷ ಜೀವಂದರ್ ಜೈನ್, ಪ್ರಸನ್ನ ಮಾರ್ತ, ನಿತೀಶ್ ಶಾಂತಿವನ, ಯುವರಾಜ್ ಪೆರಿಯೋತ್ತಡಿ, ಅಜಿತ್ ಬಲ್ನಾಡು ಸಹಿತ ಹಲವರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here