





ಪುತ್ತೂರು: ಕರ್ನಾಟಕ ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಅಯನೂರು ಮಂಜುನಾಥ ಮತ್ತು ಡಾ.ಕೆ.ಕೆ ಮಂಜುನಾಥ ಪರವಾಗಿ ಶಿಕ್ಷಕ ಕ್ಷೇತ್ರದ ಉಸ್ತುವಾರಿ ಕೃಷ್ಣಪ್ರಸಾದ್ ಆಶ್ವ ನೇತೃತ್ವದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ತೆರಳಿ ಪ್ರಚಾರ ನಡೆಸಿ ಮತ ಯಾಚಿಸಿದರು.



ಪುತ್ತೂರಿನ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು, ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಪಿಲೋಮಿನಾ ಶಿಕ್ಷಣ ಸಂಸ್ಥೆ, ವಿವೇಕಾನಂದ ಶಿಕ್ಷಣ ಸಂಸ್ಥೆ, ಬೆಥನಿ ಶಿಕ್ಷಣ ಸಂಸ್ಥೆಗಳು ನಿಂತಿಕಲ್ಲು ಕಾಲೇಜು ಸೇರದಂತೆ ಹಲವು ಶಿಕ್ಷಣ ಸಂಸ್ಥೆಗಳಿಗೆ ತರಳಿ ಮತಯಾಚಿಸಿದರು.
ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಶರೂನ್ ಸಿಕ್ವೇರಾ, ಸೇವಾದಳದ ಅಧ್ಯಕ್ಷ ವಿಶ್ವಜಿತ್ ಅಮ್ಮುಂಜ, ಪಾಲಿಟೆಕ್ನಿಕ ಕಾಲೇಜಿನ ಉಪನ್ಯಾಸಕ ಪ್ರಶಾಂತ್, ನಿವೃತ್ತ ಪ್ರಾಂಶುಪಾಲ ಚೆರಿಯನ್, ಮೋಹನ್ ಮೊದಲಾದವರು ಉಪಸ್ಥಿತರಿದ್ದರು.














