ಪಡುಮಲೆ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

0

ಪಡುಮಲೆ: ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ಪಡುಮಲೆ ಇಲ್ಲಿ ಮೇ.31ರಂದು ಶಾಲಾ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಮಾಡಲಾಯಿತು.
ಶಾಲಾ ಶೈಕ್ಷಣಿಕ ವರ್ಷಕ್ಕೆ ಮಕ್ಕಳಿಗೆ ಆರತಿ ಬೆಳಗಿ ಹಣೆಗೆ ತಿಲಕವಿಟ್ಟು ಶಾಲೆಗೆ ಸ್ವಾಗತಿಸಲಾಯಿತು. ಶಾಲಾ ಎಸ್‌ ಡಿಎಂಸಿ ಅಧ್ಯಕ್ಷೆ ತೇಜಲಕ್ಷ್ಮೀ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ ಸದಸ್ಯರುಗಳಾದ ರವಿರಾಜ್‌ ರೈ ಸಜಂಕಾಡಿ ಹಾಗೂ ಕುಮಾರ್‌ ಅಂಬಟೆ ಮೂಲೆ ಸಭೆಯಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆ ಮಾಡಲಾಯಿತು. ಕುಮಾರ್‌ ಅಂಬಟಮೂಲೆ ಮಕ್ಕಳಿಗೆ ಪೆನ್ನುಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಪ್ರಭಾರ ಮುಖ್ಯಗುರು ಪರಮೇಶ್ವರಿ ಎ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಸೌಮ್ಯ ಕೆ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಅರುಣಾಕುಮಾರಿ ವಂದಿಸಿದರು.

ಎಸ್‌ ಡಿ ಎಂ ಸಿ ಉಪಾಧ್ಯಕ್ಷರು, ಸದಸ್ಯರು,ಪೋಷಕ ವೃಂದ,ಅಡುಗೆ ಸಿಬ್ಬಂದಿ,ಹಾಗೂ ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here