





ಕಾಣಿಯೂರು: ವಿಧಾನಪರಿಷತ್ ನ ನೈಋತ್ಯ ಪದವೀಧರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಚುನಾವಣೆಯು ಜೂನ್ 3 ರಂದು ನಡೆಯಲಿದ್ದು ಆ ಪ್ರಯುಕ್ತ ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರು,ಸರಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಕಾಣಿಯೂರು ಇಲ್ಲಿನ ಶಿಕ್ಷಕರು ಹಾಗೂ ಚಾರ್ವಾಕ ಪ್ರಾ.ಕೃ.ಪ.ಸಹಕಾರಿ ಸಂಘ ಕಾಣಿಯೂರು ಸಿಬ್ಬಂದಿಗಳನ್ನು ಭೇಟಿಯಾಗಿ ಪದವೀಧರ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಪರವಾಗಿ ಮತ ಯಾಚನೆ ಮಾಡಲಾಯಿತು.



ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ಬಿ.ಕೆ.,ಸವಣೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ತಾರಾನಾಥ ಕಾಯರ್ಗ,ಚಾರ್ವಾಕ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ,ನಿರ್ದೇಶಕ ಪರಮೇಶ್ವರ ಅನಿಲ,ಕಾಣಿಯೂರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಧನಂಜಯ ಕೇನಾಜೆ,ಕಾಣಿಯೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ ಉಪಸ್ಥಿತರಿದ್ದರು.
















