ಉಪ್ಪಿನಂಗಡಿ: ಇಂದ್ರಪ್ರಸ್ಥ ಶಾಲಾ ಪ್ರಾರಂಭೋತ್ಸವ

0

ಉಪ್ಪಿನಂಗಡಿ: ಇಲ್ಲಿನಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಮೇ.31ರಂದು ಶಾಲಾ ಪ್ರಾರಂಭೋತ್ಸವನ್ನು ಆಚರಿಸಲಾಯಿತು. ವಿದ್ಯಾಲಯಕ್ಕೆ ಆಗಮಿಸಿದ ವಿದ್ಯಾರ್ಥಿಗಳು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ತರಗತಿಗಳಿಗೆ ತೆರಳಿದರು.

ವಿದ್ಯಾಲಯಕ್ಕೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ ಬೆಳಗಿಸಿ ತಿಲಕವಿಡುವ ಮೂಲಕ ಸ್ವಾಗತಿಸಿಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿಮುಖ್ಯ ಅತಿಥಿಯಾಗಿ ಭಾಗವಹಿಸಿದ ವೈದ್ಯ ಎಸ್. ಎಸ್. ಶರ್ಮ ವಿದ್ಯಾಲಯದ ಶಿಕ್ಷಕರಿಂದಲೇ ರಚಿತಗೊಂಡಂತಹ ಚಟುವಟಿಕೆ ಆಧಾರಿತ ಕಲಿಕೆಗೆ ಪೂರಕವಾದ ಪುಸ್ತಕ ಇಂದ್ರಜ್ಞಾನವನ್ನು ಬಿಡುಗಡೆಗೊಳಿಸಿದರಲ್ಲದೆ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ಈ ಸಂಸ್ಥೆ ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಸಂಸ್ಥೆಯ ಸಂಚಾಲಕ ಸುಬ್ರಮಣ್ಯ ಭಟ್ ವಿದ್ಯಾರ್ಥಿಗಳಿಗೆ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಕರುಣಾಕರ ಸುವರ್ಣ, ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
ವಿದ್ಯಾಲಯದ ಮುಖ್ಯ ಶಿಕ್ಷಕಿ ವೀಣಾ ಆರ್. ಪ್ರಸಾದ್ ಸ್ವಾಗತಿಸಿದರು. ಸಹ ಶಿಕ್ಷಕಿಯರಾದ ನಂದಶ್ರೀ ಹಾಗೂ ರೇಷ್ಮಾ ಕಾರ್ಯಕ್ರಮ ನಿರೂಪಿಸಿದರು, ಕುಮಾರಿ ಭಾಗ್ಯಶ್ರೀ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here