ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

0

ಕೆಮ್ಮಾರ: ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮೇ.30ರಂದು ನಡೆಯಿತು.
ಸಭಾಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಬಿ.ಕೆ ಅಝೀಝ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ತೇಜಾವತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ ಬಡಿಲ, ಎಸ್.ಡಿ.ಎಂ.ಸಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ಬಡಿಲ, ಎಸ್.ಡಿ.ಎಂ.ಸಿ ಸದಸ್ಯರಾದ ವಾಮನ ಬರಮೇಲು, ಖಾದರ್ ಅಡೆಕ್ಕಲ್, ಅಬ್ಬಾಸ್ , ಶರೀಫ್ ಯು.ಕೆ, ಸೆಲಿಕತ್, ಯೋಗಿತಾ ಹಾಗೂ ಪೋಷಕರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ.ಸಿ ವತಿಯಿಂದ ಸಿಹಿ ತಿಂಡಿ, ಪಾಯಸದೂಟ ಹಾಗೂ ಊರಿನ ಹಿರಿಯರಾದ ಅಬ್ಬಾಸ್ ಮಿಠಾಯಿ ಕೊಟ್ಟು ಸಹಕರಿಸಿದರು. ಸುಮನ ಕೆ.ಎಸ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರುಗಳಾದ ಜಯಶ್ರೀ ಎಂ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗೈದರು. ಶಿಕ್ಷಕಿ ಸಂಧ್ಯಾ ಧನ್ಯವಾದಗೈದರು.

LEAVE A REPLY

Please enter your comment!
Please enter your name here