ಪಡುಬೆಟ್ಟು: ವಿಶ್ವ ತಂಬಾಕು ವಿರೋಧಿ ದಿನಾಚರಣೆ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಇದರ ನೆಲ್ಯಾಡಿ ವಲಯದ ವತಿಯಿಂದ ಪಡುಬೆಟ್ಟು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಪ್ರಯುಕ್ತ ಜಾಗೃತಿ ಕಾರ್ಯಕ್ರಮ ಮೇ.30ರಂದು ನಡೆಯಿತು.


ಪಡುಬೆಟ್ಟು ಒಕ್ಕೂಟದ ಅಧ್ಯಕ್ಷರಾದ ಜೋನ್ ಮೊಂತೆರರವರು ಅಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್‌ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಂಬಾಕು ವಸ್ತುಗಳ ಸೇವನೆಯಿಂದ ಮಾರಕ ಖಾಯಿಲೆಗಳು ಜಾಸ್ತಿಯಾಗುತ್ತಿದ್ದು ತಮ್ಮ ಮಕ್ಕಳನ್ನು ತಂಬಾಕು ಪದಾರ್ಥಗಳಿಂದ ದೂರ ಇರುವಂತೆ ಜಾಗೃತಿ ವಹಿಸಬೇಕೆಂದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನೆಲ್ಯಾಡಿ ಪಿಎಂ ಶ್ರೀ ಶಾಲೆಯ ಪ್ರಾಧ್ಯಾಪಕಿ ಮೇರಿ ಜಾನ್ ಅವರು ಮಾತನಾಡಿ, ತಂಬಾಕು ಸೇವನೆಯಿಂದ ಉಂಟಾಗುವ ಖಾಯಿಲೆಗಳು, ಅದರಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆಗೆ ಮಾಹಿತಿ ನೀಡಿದರು.
ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಹಾರ್ಪಳ ಶುಭ ಹಾರೈಸಿದರು. ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು. ನೆಲ್ಯಾಡಿ ವಲಯದ ಮೇಲ್ವಿಚಾರಕರಾದ ವಿಜೇಶ್ ಜೈನ್ ಪ್ರಸ್ತಾವಿಕವಾಗಿ ಮಾತಾಡಿದರು. ಸೇವಾ ಪ್ರತಿನಿಧಿ ಮೋಹಿನಿ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here