ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ

0

ಕಾಣಿಯೂರು: 2024 -25ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಜೂ 3ರಂದು ವಾದ್ಯ ಘೋಷಗಳೊಂದಿಗೆ ಅತ್ಯಂತ ಸಂಭ್ರಮ ಸಡಗರದಿಂದ ಮಕ್ಕಳನ್ನು ಸಭಾಂಗಣಕ್ಕೆ ಬರಮಾಡಿಕೊಳ್ಳುವುದರೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾಧಿದೇವತೆ ಶಾರದಾ ದೇವಿಗೆ ಪುಷ್ಪಾರ್ಚನೆ ಮಾಡಲಾಯಿತು. ಮಕ್ಕಳಿಗೆ ಆರತಿಯನ್ನು ಬೆಳಗಿ ತಿಲಕವನ್ನು ಇಟ್ಟು ಶಿಕ್ಷಕ ವೃಂದದವರು ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ವಿದ್ಯೆ ಕಲಿಯಲು ಬಂದ ವಿದ್ಯಾರ್ಥಿಗಳು ಹುಮ್ಮಸ್ಸಿನಿಂದಿದ್ದು ಹೊಸದನ್ನು ಕಲಿಯಬೇಕೆನ್ನುವ ಕುತೂಹಲವಿರಬೇಕೆಂದರು.


ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ವಿಶೇಷವಾಗಿ ಈ ಸಂದರ್ಭದಲ್ಲಿ ದೀಪಾರತಿ ಮತ್ತು ತಿಲಕವನ್ನಿಟ್ಟು ಸ್ವಾಗತಿಸಲಾಯಿತು.
ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಟ್ರಸ್ಟಿ ದೇವಿಕಿರಣ್ ರೈ ಮಾದೋಡಿ, ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಆಂಗ್ಲ ಮಾಧ್ಯಮದ ಮುಖ್ಯಗುರುಗಳಾದ ನಾರಾಯಣ ಭಟ್ , ಕನ್ನಡ ಮಾಧ್ಯಮದ ಮುಖ್ಯಗುರುಗಳಾದ ವಿನಯ ವಿ ಶೆಟ್ಟಿ, ಆಂಗ್ಲ ಮಾಧ್ಯಮದ ಸಹ ಮುಖ್ಯಸ್ಥೆ ಅನಿತಾ ಜೆ ರೈ, ಸಹ ಆಡಳಿತಾಧಿಕಾರಿ ಹೇಮಾ ನಾಗೇಶ್ ರೈ, ಹಿರಿಯ ಶಿಕ್ಷಕಿ ಸವಿತಾ ಕೆ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಜಯಶೀಲ ಕೆ ಪ್ರಾರ್ಥಿಸಿದರು. ಶಿಕ್ಷಕಿ ಸೌಮ್ಯ ರೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶರ್ಮಿಳಾ ಕೆ ಎಸ್ ವಂದಿಸಿದರು. ಶಿಕ್ಷಕಿ ವಿಮಲ, ದೈಹಿಕ ಶಿಕ್ಷಣ ಶಿಕ್ಷಕರಾದ ಜಯಚಂದ್ರ ಮತ್ತು ವನಿತಾ ಕಾರ್ಯಕ್ರಮವನ್ನು ಸಂಘಟಿಸಿದರು.

LEAVE A REPLY

Please enter your comment!
Please enter your name here