ಷಣ್ಮುಖ ದೇವ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಳ್ತಿಗೆ ಇದರ ಸಹಯೋಗದೊಂದಿಗೆ ಮಕ್ಕಳಲ್ಲಿ ಆರೋಗ್ಯ ಜಾಗೃತಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ಕೊಳ್ತಿಗೆ ಇದರ ಆರೋಗ್ಯ ಸಹಾಯಕಿ ಲೀಲಾವತಿ ಮಾತನಾಡಿ, ಮಳೆಗಾಲದಲ್ಲಿ ಹರಡುವ ಮಲೇರಿಯ, ಡೆಂಗ್ಯೂ, ಇನ್ನೂ ಮುಂತಾದವುಗಳ ಬಗ್ಗೆ ಹಾಗೂ ತಂಬಾಕು ವ್ಯಸನಗಳಿಂದಾಗುವ ಅಪಾಯಗಳ ಬಗ್ಗೆ ಸಾಕ್ಷ್ಯ ಚಿತ್ರದ ಮೂಲಕ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳು, ಶಿಕ್ಷಕ ವೃಂದ, ಶಿಕ್ಷಕೇತರು, ಅಡುಗೆ ಸಿಬ್ಬಂದಿಗಳು, ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.