ಸಂತ ಫಿಲೋಮಿನಾ ಪ್ರಥಮ ಪ.ಪೂ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ರ‍್ಯಾಂಕ್‌ ವಿಜೇತರಿಗೆ ಸನ್ಮಾನ

0


ಪುತ್ತೂರು: ವಿದ್ಯಾರ್ಥಿಗಳ ಒಳ್ಳೆಯ ಭವಿಷ್ಯಕ್ಕೆ ಉತ್ತಮ ಆಯ್ಕೆ ಸಂತ ಫಿಲೋಮಿನಾ ಪ.ಪೂ ಕಾಲೇಜು. ಮಕ್ಕಳ ಭವಿಷ್ಯದ ಬಗ್ಗೆ ಹೆತ್ತವರು ಕೂಡ ಕಾಳಜಿ ವಹಿಸಬೇಕು ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ವಿಜಯ ಬ್ಯಾಂಕ್ ನ ನಿವೃತ್ತ ಸಹಾಯಕ ಮುಖ್ಯ ವ್ಯವಸ್ಥಾಪಕರು ಆಗಿರುವ ಎ ಜಗಜೀವನ್ ದಾಸ್ ರೈ ಅವರು ಹೇಳಿದರು.


ಜೂನ್ 3ರಂದು ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪ. ಪೂ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಿರುವುದು ಸಂತೋಷ .ಆದರೆ ಆ ಸಾಧನೆ ಇಲ್ಲಿಗೆ ಸೀಮಿತವಾಗದೆ ನಿರಂತರವಾಗಿರಬೇಕು ವಿಶೇಷ ಸಾಧಕರಾಗಿ ದೇಶಕ್ಕೆ ಕೊಡುಗೆಯಾಗಿ, ಸಮಾಜಕ್ಕೆ ಆಸ್ತಿಯಾಗಿರಿ ಎಂದು ಶುಭಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ. ಫಾ. ಲಾರೆನ್ಸ್ ಮಸ್ಕರೇನಸ್ ಮಾತನಾಡಿ ವಿದ್ಯಾರ್ಥಿಗಳು ಸಾಧನೆಯ ಗುರಿಯೊಂದಿಗೆ ಸಂಕಲ್ಪ ಮಾಡಬೇಕು. ಮನಸ್ಸಿದ್ದರೆ ನಾವು ಅಂದುಕೊಂಡಿದ್ದನ್ನು ಸಾಧಿಸಬಹುದು. ವಿದ್ಯಾರ್ಥಿ ಜೀವನ ಎಂಬುದು ಬದುಕಲ್ಲಿ ಬರುವ ಅತ್ಯಂತ ಅಮೂಲ್ಯ ಮತ್ತು ಸುಂದರವಾದ ಸಮಯ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷರಾದ ಜೆರಾಲ್ಡ್ ಡಿಕೋಸ್ಟ, ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರತಿಮಾ ಹೆಗ್ಡೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
2023 – 24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 8ನೇ ರ‍್ಯಾಂಕ್‌ ಪಡೆದ ಪಿ ಹಲಿಮತ್ ಶೈಮಾ, 10ನೇ ರ‍್ಯಾಂಕ್‌ ಪಡೆದ ಪ್ರವನ್ ಪೊನ್ನಪ್ಪ ಎಂ ಎನ್ , ವಾಣಿಜ್ಯ ವಿಭಾಗದಲ್ಲಿ 10ನೇ ರ‍್ಯಾಂಕ್‌ ಪಡೆದ ಪ್ರತೀಕ್ಷಾ ಡಿ ಎಸ್ ಇವರನ್ನು ಸನ್ಮಾನಿಸಲಾಯಿತು ಹಾಗೂ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 190 ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.
ಎಸ್ .ಎಸ್. ಎಲ್.ಸಿಯಲ್ಲಿ ಅತಿ ಹೆಚ್ಚು ಅಂಕವನ್ನು ಪಡೆದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅಪೂರ್ವ ಅವರನ್ನು ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ ‘ಫಿಲೋ ದರ್ಶನ’ ಮತ್ತು ಕಾಲೇಜ್ ವೆಬ್ಸೈಟ್ ನ್ನು ಅನಾವರಣಗೊಳಿಸಲಾಯಿತು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ ಪ್ರಾಸ್ತಾವಿಕ ನುಡಿಗಳನ್ನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರದರ್ಶನ ಕಲಾಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕಿಯರಾದ ಫಿಲೋಮಿನಾ ಮೊಂತೆರೋ ಸ್ವಾಗತಿಸಿ, ರೇಖಾ ವಂದಿಸಿ, ಸುಮಾ ಡಿ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here