ನರಿಮೊಗರು ಬಿಲ್ಲವ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ಪುಸ್ತಕ ವಿತರಣೆ

0

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ನರಿಮೊಗರು ಇದರ ವಾರ್ಷಿಕ ಮಹಾಸಭೆ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ ನರಿಮೊಗರಿನಲ್ಲಿ ನಡೆಯಿತು. ಕುಮಾರಿ ದ್ರಿಷ ಮಣಿಯ ಪ್ರಾರ್ಥಿಸಿದರು. ನರಿಮೊಗರು ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷ ವೇದನಾಥ ಸುವರ್ಣ ಸಭಾಧ್ಯಕ್ಷತೆ ವಹಿಸಿದ್ದರು.
ದೀಪ ಬೆಳಗಿಸಿ ಉದ್ಘಾಟಿಸಿದ ಬಿಲ್ಲವ ಸಂಘ ಪುತ್ತೂರು ಇದರ ಪ್ರ.ಕಾರ್ಯದರ್ಶಿ ಚಿದಾನಂದ ಸುವರ್ಣ ಮಾತನಾಡಿ ವಿದ್ಯೆ ಜೊತೆ ಉತ್ತಮ ಸಂಸ್ಕಾರ ಕೂಡಾ ಕಲಿಯಬೇಕೆಂದು ಮಕ್ಕಳಿಗೆ ಹೇಳಿದರು. ನಂತರ ಪುಸ್ತಕ ವಿತರಿಸಲಾಯಿತು.
ವೇದಿಕೆಯಲ್ಲಿ ಮಾಜಿ ಅಧ್ಯಕ್ಷರುಗಳಾದ ಗಂಗಾಧರ ಸುವರ್ಣ, ಪದ್ಮನಾಭ ಪೂಜಾರಿ, ಪ್ರಭಾಕರ್ ಸಾಲಿಯಾನ್, ಗುರು ಮಂದಿರದ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್, ವಲಯ ಸಂಚಾಲಕರಾದ ಹರೀಶ್, ತಾಲೂಕು ವಿದ್ಯಾರ್ಥಿ ಸಂಘದ ಅಧ್ಯಕ್ಷ ಭವೀಷ್ ಸುವರ್ಣ, ಗ್ರಾಮ ಸಮಿತಿ ಮಹಿಳಾ ಘಟಕದ ಅಧ್ಯಕ್ಷೆ ಜಯಲಕ್ಷ್ಮೀ ರಾಜೀವ ಉಪಸ್ಥಿತರಿದ್ದರು.

ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಯಮುನಾ ಸ್ವಾಗತಿಸಿದರು. ಕಾರ್ಯದರ್ಶಿ ಚಂದ್ರಕಲಾ ವರದಿ ವಾಚಿಸಿದರು. ಉಪಾಧ್ಯಕ್ಷ ಜನಾರ್ದನ ಕೂಡುರಸ್ತೆ ವಂದಿಸಿದರು. ಮಾಜಿ ಅಧ್ಯಕ್ಷ ಜಯರಾಮ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here